ಬೆಂಗಳೂರು: 2022 ರ ಮಾರ್ಚ್ನಲ್ಲಿ ಸೆಟ್ಟೇರಿದ್ದ ಜನಾರ್ದನ ರೆಡ್ಡಿ ಪುತ್ರ ಕಿರೀಟಿ ನಟನೆಯ ಚೊಚ್ಚಲ ಚಿತ್ರ ರಿಲೀಸ್ಗೆ ಸಜ್ಜಾಗಿದೆ. ಜುಲೈ 18ಕ್ಕೆ ‘ಜೂನಿಯರ್’ ಸಿನಿಮಾ ತೆರೆಕಾಣಲಿದೆ.

ಈ ಸಿನಿಮಾ ಪ್ಯಾನ್ ಇಂಡಿಯಾದಾಗಿದದು, ಕನ್ನಡ ಸೇರಿದಂತೆ ಐದು ಭಾಷೆಗಳಲ್ಲಿ ರಿಲೀಸ್ ಆಗಲಿದೆ. ‘ಮಾಯಾಬಜಾರ್’ ಸಿನಿಮಾ ಖ್ಯಾತಿಯ ರಾಧಾಕೃಷ್ಣ ರೆಡ್ಡಿ ಈ ಚಿತ್ರಕ್ಕೆ ಆ್ಯಕ್ಷನ್ ಕಟ್ ಹೇಳಿದ್ದಾರೆ. ದಕ್ಷಿಣ ಭಾರತದ ಖ್ಯಾತ ನಿರ್ಮಾಣ ಸಂಸ್ಥೆ ವಾರಾಹಿ ಫಿಲ್ಮಂ ಪ್ರೊಡಕ್ಷನ್ ಈ ಚಿತ್ರಕ್ಕೆ ಬಂಡವಾಳ ಹೂಡಿದೆ. ಕ್ರೇಜಿಸ್ಟಾರ್ ರವಿಚಂದ್ರನ್, ಜೆನಿಲಿಯಾ ರಿತೇಶ್ ದೇಶ್ಮುಖ್ ಚಿತ್ರದಲ್ಲಿ ನಟಿಸಿದ್ದು, ಕಿರೀಟಿಗೆ ಜೋಡಿಯಾಗಿ ನಟಿ ಶ್ರೀಲೀಲಾ ಬಣ್ಣಹಚ್ಚಿದ್ದಾರೆ.

ಖ್ಯಾತ ಸಂಗೀತ ನಿರ್ದೇಶಕ ದೇವಿಶ್ರೀ ಪ್ರಸಾದ್ ಸಂಗೀತ, ‘ಬಾಹುಬಲಿ’ ಸಿನಿಮಾ ಖ್ಯಾತಿಯ ಕೆ.ಕೆ.ಸೆಂಥಿಲ್ ಕುಮಾರ್ ಛಾಯಾಚಿತ್ರಗ್ರಹಣ, ಪೀಟರ್ ಹೆನ್ ಸಾಹಸ ನಿರ್ದೇಶನ ಚಿತ್ರಕ್ಕಿದೆ.

ಚಿತ್ರ ಬಿಡುಗಡೆಗೆ ಮುಹೂರ್ತ ಇಟ್ಟಿರುವ ಚಿತ್ರತಂಡ ಪ್ರಚಾರಕ್ಕೂ ಯೋಜನೆ ಹಾಕಿಕೊಂಡಿದೆ. ಇದೇ ತಿಂಗಳ 19ಕ್ಕೆ ಚಿತ್ರದ ಮೊದಲ ಹಾಡು ಬಿಡುಗಡೆ ಮಾಡುವ ಮೂಲಕ ಪ್ರಚಾರಕ್ಕೆ ಚಿತ್ರತಂಡ ಚಾಲನೆ ನೀಡಲಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.