ಜೂನಿಯರ್ ಎನ್ಟಿಆರ್ ಹಾಗೂ ಪ್ರಶಾಂತ್ ನೀಲ್ ಕಾಂಬಿನೇಷನ್ನಲ್ಲಿ ಅದ್ದೂರಿ ಚಿತ್ರವೊಂದು ಸಿದ್ಧಗೊಳ್ಳುತ್ತಿರುವುದು ಗೊತ್ತೇ ಇದೆ. ಸಿನಿಮಾ ಚಿತ್ರೀಕರಣ ಮುಂದೂಡಿಕೆ, ಸ್ಥಗಿತ, ಬಿಡುಗಡೆ ಮೊದಲಾದ ವಿಷಯಗಳ ಕುರಿತು ಯಾವುದೇ ವದಂತಿಗಳಿಗೆ ಕಿಬಿಗೊಡಬೇಡಿ ಎಂದು ಚಿತ್ರ ನಿರ್ಮಾಣ ಸಂಸ್ಥೆಯಾದ ಮೈತ್ರಿ ಮೂವಿ ಮೇಕರ್ಸ್ ಅಭಿಮಾನಿಗಳಲ್ಲಿ ಮನವಿ ಮಾಡಿಕೊಂಡಿದೆ.

‘ಕೆಜಿಎಫ್’ ಖ್ಯಾತಿಯ ಪ್ರಶಾಂತ್ ನೀಲ್ ‘ಸಲಾರ್’ ಬಳಿಕ ಕೈಗೆತ್ತಿಕೊಂಡ ಚಿತ್ರವಿದು. ಈ ಸಿನಿಮಾದ ಮುಂದಿನ ಹಂತದ ಚಿತ್ರೀಕರಣ ವಿಳಂಬವಾಗುತ್ತಿದೆ ಎಂದು ವದಂತಿ ಹಬ್ಬಿತ್ತು. ಚಿತ್ರೀಕರಣದ ದಿನಾಂಕ ಸಮಸ್ಯೆಯಿಂದ ಮಲಯಾಳ ನಟ ಟೋವಿನೋ ಥಾಮಸ್ ಚಿತ್ರತಂಡದಿಂದ ಹೊರಬಂದಿದ್ದಾರೆ ಎನ್ನಲಾಗಿತ್ತು.

ಇದರ ಬೆನ್ನಲ್ಲೇ ನಿರ್ಮಾಣ ಸಂಸ್ಥೆ ಅಧಿಕೃತ ಪ್ರಕಟಣೆ ಹೊರಡಿಸಿದ್ದು, ಮುಂದಿನ ಹಂತದ ಚಿತ್ರೀಕರಣಕ್ಕೆ ಆಲೋಚಿಸುತ್ತಿರುವ ಅಥವಾ ಚಿತ್ರೀಕರಣವನ್ನು ರದ್ದುಗೊಳಿಸಿರುವ ಸುದ್ದಿಯಲ್ಲಿ ಯಾವುದೇ ಹುರುಳಿಲ್ಲ. ಈ ಮೊದಲಿನ ಯೋಜನೆಯಂತೆ ಸಿನಿಮಾ ಚಿತ್ರೀಕರಣ ನಡೆಯುತ್ತಿದೆ. ಮುಂದಿನ ಹಂತದ ಸಿದ್ಧತೆಗಾಗಿ ಸಣ್ಣ ವಿರಾಮವನ್ನು ನೀಡಿದ್ದೇವೆ. ಹೀಗಾಗಿ ಸಿನಿಮಾ ಕುರಿತಾದ ತಪ್ಪು ಮಾಹಿತಿಗಳನ್ನು ನಂಬಬೇಡಿ ಮತ್ತು ಹಂಚಿಕೊಳ್ಳಬೇಡಿ. ನಿರ್ಮಾಣ ಸಂಸ್ಥೆಯ ಅಧಿಕೃತ ಮಾಹಿತಿಗಳನ್ನು ಮಾತ್ರ ಅನುಸರಿಸಿ ಎಂದು ಮೈತ್ರಿಮೇಕರ್ಸ್ ‘ಎಕ್ಸ್’ನಲ್ಲಿ ಪೋಸ್ಟ್ ಮಾಡಿದೆ.

ಜೂನಿಯರ್ ಎನ್ಟಿಆರ್ ಹಾಗೂ ಪ್ರಶಾಂತ್ ನೀಲ್ ಜೋಡಿಯ ಸಿನಿಮಾ ಸಾಕಷ್ಟು ನಿರೀಕ್ಷೆ ಹುಟ್ಟಿಸಿದೆ. ಕುಮಟಾದ ಕಡಲ ಕಿನಾರೆಯಲ್ಲಿ ಸೆಟ್ ಹಾಕಿ ಚಿತ್ರದ ಒಂದಷ್ಟು ಭಾಗ ಚಿತ್ರೀಕರಿಸಲಾಗಿದೆ. ‘ಕಾಂತಾರ–1’ ಖ್ಯಾತಿಯ ರುಕ್ಮಿಣಿ ವಸಂತ್ ಚಿತ್ರದ ನಾಯಕಿ. ಬಾಲಿವುಡ್ನ ಅನಿಲ್ ಕಪೂರ್ ಕೂಡ ಪ್ರಮುಖ ಪಾತ್ರದಲ್ಲಿ ನಟಿಸುತ್ತಿದ್ದಾರೆ. ಈಗಾಗಲೇ ಅರ್ಧದಷ್ಟು ಚಿತ್ರೀಕರಣ ಪೂರ್ಣಗೊಂಡಿದ್ದು, ಮುಂದಿನ ವರ್ಷ ಚಿತ್ರ ತೆರೆಗೆ ಬರುವ ನಿರೀಕ್ಷೆಯಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260409-51-1980580350

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.