ಶೈನ್ ಶೆಟ್ಟಿ, ಅಂಕಿತ ಅಮರ್ ನಟನೆಯ ‘ಜಸ್ಟ್ ಮ್ಯಾರೀಡ್’ ಚಿತ್ರ ತೆರೆಗೆ ಬರಲು ಸಿದ್ಧವಾಗಿದೆ. ಇತ್ತೀಚೆಗಷ್ಟೇ ಚಿತ್ರದ ಸೆನ್ಸಾರ್ ಪ್ರಕ್ರಿಯೆ ಮುಗಿದಿದೆ. ಸಿ.ಆರ್. ಬಾಬಿ ನಿರ್ದೇಶನದ ಚಿತ್ರಕ್ಕೆ ಸಂಗೀತ ನಿರ್ದೇಶಕ ಅಜನೀಶ್ ಲೋಕನಾಥ್ ಬಂಡವಾಳ ಹೂಡಿದ್ದಾರೆ.

‘ಇತ್ತೀಚೆಗೆ ಈ ಚಿತ್ರವನ್ನು ವೀಕ್ಷಿಸಿದ ಪ್ರಾದೇಶಿಕ ಸೆನ್ಸಾರ್ ಮಂಡಳಿ ಯು/ಎ ಪ್ರಮಾಣಪತ್ರವನ್ನು ನೀಡಿದೆ. ಸದ್ಯದಲ್ಲೇ ಚಿತ್ರ ಬಿಡುಗಡೆ ದಿನಾಂಕವನ್ನು ತಿಳಿಸುತ್ತೇವೆ. ಪ್ರೇಮಕಥೆಯೊಂದಿಗೆ ಕೌಟುಂಬಿಕ ಕಥಾಹಂದರವನ್ನೂ ಹೊಂದಿರುವ ಚಿತ್ರವಿದು. ಈಗಾಗಲೇ ಬಿಡುಗಡೆಯಾಗಿರುವ ಚಿತ್ರದ ಹಾಡುಗಳು ಹಾಗೂ ಟೀಸರ್ಗೆ ಪ್ರೇಕ್ಷಕರು ಪ್ರಶಂಸೆ ವ್ಯಕ್ತಪಡಿಸಿದ್ದಾರೆ’ ಎಂದಿದೆ ಚಿತ್ರತಂಡ.

ದೇವರಾಜ್, ಅಚ್ಯುತಕುಮಾರ್, ಮಾಳವಿಕ ಅವಿನಾಶ್, ಅನೂಪ್ ಭಂಡಾರಿ, ಶ್ರುತಿ ಹರಿಹರನ್, ಶ್ರುತಿ ಕೃಷ್ಣ, ಸಾಕ್ಷಿ ಅಗರವಾಲ್, ಶ್ರೀಮಾನ್, ರವಿಶಂಕರ್ ಗೌಡ, ರವಿ ಭಟ್, ವಾಣಿ ಹರಿಕೃಷ್ಣ ಮುಂತಾದವರು ಈ ಚಿತ್ರದಲ್ಲಿ ಅಭಿನಯಿಸಿದ್ದಾರೆ.

ಚಿತ್ರದಲ್ಲಿ ಆರು ಹಾಡುಗಳಿದ್ದು ಅಜನೀಶ್ ಲೋಕನಾಥ್ ಅವರೆ ಸಂಗೀತ ಸಂಯೋಜನೆ ಮಾಡಿದ್ದಾರೆ. ಚಿತ್ರಕಥೆ ಸಿ.ಆರ್.ಬಾಬಿ ಹಾಗೂ ಧನಂಜಯ್ ರಂಜನ್ ಅವರದ್ದು. ರಘು ನಿಡುವಳ್ಳಿ ಸಂಭಾಷಣೆ, ಪಿ.ಜಿ. ಛಾಯಾಚಿತ್ರಗ್ರಹಣ, ಶ್ರೀಕಾಂತ್ ಮತ್ತು ಪ್ರತೀಕ್ ಶೆಟ್ಟಿ ಸಂಕಲನವಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.