ಈ ಹಿಂದೆ ‘ರಿವಿಲ್’ ಚಿತ್ರವನ್ನು ನಿರ್ದೇಶಿಸಿದ್ದ ಮುರಳಿ ಎಸ್.ವೈ. ಆ್ಯಕ್ಷನ್–ಕಟ್ ಹೇಳುತ್ತಿರುವ ‘ಕದನ ವಿರಾಮ’ ಚಿತ್ರ ಇತ್ತೀಚೆಗಷ್ಟೇ ಸೆಟ್ಟೇರಿದೆ. ಶ್ರೀಬ್ರಹ್ಮಲಿಂಗೇಶ್ವರ ಫಿಲ್ಮ್ಸ್ ಲಾಂಛನದಲ್ಲಿ ಕೆ.ಭಾಸ್ಕರ್ ನಾಯ್ಕ್, ಸಾಮ್ರಾಟ್ ಮಂಜುನಾಥ್ ವಿ. ಈ ಚಿತ್ರಕ್ಕೆ ಬಂಡವಾಳ ಹೂಡಿದ್ದಾರೆ.

‘‘ಕದನ ವಿರಾಮ’ ಎಂದರೆ ಭೂಮಿ ಹಾಗೂ ಮನುಷ್ಯನ ನಡುವೆ ನಡೆಯುವ ಕಥೆ. ನಿರ್ಮಾಪಕ ಭಾಸ್ಕರ್ ನಾಯ್ಕ್ ಅವರೇ ಈ ಕಥೆ ಬರೆದಿದ್ದಾರೆ. ನಾನು ಚಿತ್ರಕಥೆ, ಸಂಭಾಷಣೆ ಬರೆದಿದ್ದೇನೆ. ಐದು ಹಾಡುಗಳು ಹಾಗೂ ನಾಲ್ಕು ಸಾಹಸ ಸನ್ನಿವೇಶಗಳು ಈ ಚಿತ್ರದಲ್ಲಿವೆ. ಸಿನಿಮಾದ ಬಹುತೇಕ ಚಿತ್ರೀಕರಣ ಕುಂದಾಪುರದಲ್ಲಿ ನಡೆಯಲಿದೆ. ಈ ತಿಂಗಳ ಕೊನೆಗೆ ಚಿತ್ರೀಕರಣ ಆರಂಭವಾಗಲಿದೆ’’ ಎಂದರು ನಿರ್ದೇಶಕ ಮುರಳಿ.

ವಿ.ಮನೋಹರ್ ಸಂಗೀತ ನಿರ್ದೇಶನ ಹಾಗೂ ರಿಜೊ ಪಿ. ಜಾನ್ ಅವರ ಛಾಯಾಗ್ರಹಣ ಚಿತ್ರಕ್ಕಿದೆ. ಆಕಾಶ್ ಶೆಟ್ಟಿ ಹಾಗೂ ಛಾಯಾಶ್ರೀ ಚಿತ್ರದ ನಾಯಕ, ನಾಯಕಿಯಾಗಿ ಕಾಣಿಸಿಕೊಳ್ಳುತ್ತಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.