ಶುಕ್ರವಾರ, ಏಪ್ರಿಲ್ 3, 2020
19 °C

‘ಕಾಲವೇ ಮೋಸಗಾರ’ ಮಾರ್ಚ್‌ಗೆ ತೆರೆಗೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಹುಬ್ಬಳ್ಳಿ: ‘ಬಸವಸ್ಪಂದನ’ ಪ್ರೊಡಕ್ಷನ್‌ ಬ್ಯಾನರ್‌ನಡಿ ನಿರ್ಮಾಣವಾಗುತ್ತಿರುವ ‘ಕಾಲವೇ ಮೋಸಗಾರ’ ಸಿನಿಮಾ ಮಾರ್ಚ್‌ನಲ್ಲಿ ತೆರೆ ಕಾಣಲಿದೆ ಎಂದು ಚಿತ್ರದ ನಾಯಕನಟ ಭರತ್‌ ಸಾಗರ್‌ ತಿಳಿಸಿದರು.

‘ಕಾಲವೇ ಮೋಸಗಾರ’ ಕನ್ನಡ ಸಿನಿಮಾವು ಹಿಂದಿ, ತೆಲುಗು, ತಮಿಳು ಮತ್ತು ಮಲೆಯಾಳಂನಲ್ಲಿ ‘ಲಾಸ್ಟ್‌ ಪೆಗ್‌’ ಹೆಸರಿನಲ್ಲಿ ಏಕಕಾಲದಲ್ಲಿ ತೆರೆಕಾಣಲಿದೆ ಎಂದು ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಹೇಳಿದರು.

‘ಆಟಕುಂಟು ಲೆಕ್ಕಕ್ಕಿಲ್ಲ’, ‘ಮಯೂರಿ’, ‘ನಾಗಕನ್ನೆ’ ಚಿತ್ರಗಳಲ್ಲಿ ಈಗಾಗಲೇ ನಟಿಸಿರುವ ನಾನು ಪ್ರಥಮ ಬಾರಿಗೆ ‘ಕಾಲವೇ ಮೋಸಗಾರ’ ಸಿನಿಮಾದಲ್ಲಿ ನಾಯಕನಟನಾಗಿ ನಟಿಸಿದ್ದೇನೆ ಎಂದು ತಿಳಿಸಿದರು.

ಪ್ರೀತಿ ಕಥಾವಸ್ತು ಹೊಂದಿರುವ ಈ ಸಿನಿಮಾದಲ್ಲಿ ಯಶಸ್ವಿನಿ ರವೀಂದ್ರ ನಾಯಕಿಯಾಗಿ ಅಭಿನಯಿಸಿದ್ದಾರೆ. ಸಂಜಯ್‌ ವದತ್‌ ನಿರ್ದೇಶನ ಮಾಡಿದ್ದಾರೆ. ಚಿತ್ರದಲ್ಲಿ ಐದು ಹಾಡುಗಳಿದ್ದು, ನಾಗೇಂದ್ರ ಪ್ರಸಾದ್ ಅವರ ಸಾಹಿತ್ಯ, ಅನುರಾಧ ಭಟ್‌, ಅಂಥೋಣಿ ದಾಸ್‌ ಅವರು ಹಾಡಿದ್ದಾರೆ ಎಂದರು.

ಸಿನಿಮಾದ ನಿರ್ಮಾಪಕ ಶರಣಪ್ಪ ಕೊಟಗಿ, ಬಂಗಾರೇಶ ಹಿರೇಮಠ, ಸಿದ್ದರಾಮೇಶ್ವರ ಹಿರೇಮಠ ಇದ್ದರು.‌

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು