ಬುಧವಾರ, 24 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

‘ಕಲ್ಕಿ 2898ಎಡಿ’ ಸಿನಿಮಾ ಬಿಡುಗಡೆಯಾದ ಮೂರು ದಿನ‌ಕ್ಕೆ ಗಳಿಸಿದ್ದೆಷ್ಟು?

Published 30 ಜೂನ್ 2024, 9:50 IST
Last Updated 30 ಜೂನ್ 2024, 9:50 IST
ಅಕ್ಷರ ಗಾತ್ರ

ನವದೆಹಲಿ: ಪ್ರಭಾಸ್‌, ಅಮಿತಾಭ್‌ ಬಚ್ಚನ್‌, ದೀಪಿಕಾ ಪಡುಕೋಣೆ, ಕಮಲ್‌ ಹಾಸನ್‌ ಸೇರಿದಂತೆ ದೊಡ್ಡ ತಾರಾಗಣವನ್ನೇ ಹೊಂದಿರುವ ‘ಕಲ್ಕಿ 2898 ಎಡಿ’ ಚಿತ್ರ ಜೂನ್‌ 27 ರಂದು ವಿಶ್ವದಾದ್ಯಂತ ಬಿಡುಗಡೆಯಾಗಿದ್ದು, ಮೂರೇ ದಿನದಲ್ಲಿ  ₹415 ಕೋಟಿ ಗಳಿಕೆ ಮಾಡಿದೆ.

ವಾರಾಂತ್ಯದಲ್ಲಿ ಪ್ರೇಕ್ಷಕರ ಗಮನ ಸೆಳೆದ ಸಿನಿಮಾ ದೊಡ್ಡ ಗಳಿಕೆಯತ್ತ ದಾಪುಗಾಲಿಡುತ್ತಿದೆ.

ಮಹಾಭಾರತ ಮತ್ತು ವೈಜ್ಞಾನಿಕ ಕಾದಂಬರಿಗಳ ಮಿಶ್ರಣದ ₹600 ಕೋಟಿ ವೆಚ್ಚದ ಈ ಚಿತ್ರವನ್ನು ವೈಜಯಂತಿ ಮೂವೀಸ್ ನಿರ್ಮಿಸಿದೆ. ಕಳೆದ ಶುಕ್ರವಾರ  ತೆಲುಗು, ತಮಿಳು, ಮಲಯಾಳಂ, ಕನ್ನಡ, ಹಿಂದಿ ಮತ್ತು ಇಂಗ್ಲಿಷ್ ಭಾಷೆಗಳಲ್ಲಿ ವಿಶ್ವದಾದ್ಯಂತ ಬಿಡುಗಡೆಯಾಗಿದೆ.

ಚಿತ್ರದ ಗಳಿಕೆ ಕುರಿತು ನಿರ್ದೇಶಕ ನಾಗ್‌ ಅಶ್ವಿನ್‌ ಸಾಮಾಜಿಕ ಜಾಲತಾಣಗಳಲ್ಲಿ ಮಾಹಿತಿ ಹಂಚಿಕೊಂಡಿದ್ದು, ‘ಬಲವನ್ನು ತಡೆಯಲಾಗದು’ ಎಂದು ಬರೆದುಕೊಂಡಿದ್ದಾರೆ.

ಕಲ್ಕಿ ಚಿತ್ರವನ್ನು 2ಡಿ ಮತ್ತು 3ಡಿಯಲ್ಲಿ ಬಿಡುಗಡೆ ಮಾಡಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT