ಬುಧವಾರ, 7 ಜೂನ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೆಜಿಎಫ್–2 ಸಿನಿಮಾ ವೀಕ್ಷಿಸಿದ ಇಳಯರಾಜ, ಕಮಲ್ ಹಾಸನ್‌: ಫೋಟೊ ವೈರಲ್ 

Last Updated 29 ಏಪ್ರಿಲ್ 2022, 11:02 IST
ಅಕ್ಷರ ಗಾತ್ರ

ಚೆನ್ನೈ: ಸಂಗೀತ ಮಾತ್ರಿಕ ಇಳಯರಾಜ, ಬಹುಭಾಷಾ ನಟ ಕಮಲ್ ಹಾಸನ್ ಅವರು ಒಟ್ಟಿಗೆ ಕೆಜಿಎಫ್‌ ಚಾಪ್ಟರ್‌–2 ಸಿನಿಮಾ ವೀಕ್ಷಿಸಿದ್ದು,ಚಿತ್ರತಂಡಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಸಿನಿಮಾ ವೀಕ್ಷಿಸಿ ಚಿತ್ರಮಂದಿರದಿಂದ ಹೊರಬರುತ್ತಿರುವ ಫೋಟೊಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿವೆ.

ಪ್ರಶಾಂತ್ ನೀಲ್ ಆ್ಯಕ್ಷನ್ ಕಟ್ ಹೇಳಿರುವ, ರಾಕಿಂಗ್ ಸ್ಟಾರ್ ಯಶ್ ಅಭಿನಯದ ಈ ಚಿತ್ರ ವಿಶ್ವದಾದ್ಯಂತ ಏ.14ರಂದು ಬಿಡುಗಡೆಯಾಗಿದೆ. ಪ್ರೇಕ್ಷಕರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ಕನ್ನಡ ಮಾತ್ರವಲ್ಲದೆ, ಹಿಂದಿ, ತೆಲುಗು, ತಮಿಳು ಮತ್ತು ಮಲಯಾಳಂನಲ್ಲಿ ತುಂಬಿದ ಚಿತ್ರಮಂದಿರಗಳಲ್ಲಿ ಪ್ರದರ್ಶನವಾಗುತ್ತಿದೆ.

ಹೊಂಬಾಳೆ ಫಿಲಂಸ್ ನಿರ್ಮಾಣದ ಕೆಜಿಎಫ್ ಚಾಪ್ಟರ್–2 ಸಿನಿಮಾದಲ್ಲಿ ಯಶ್ ನಾಯಕ ನಟನಾಗಿ ಅಭಿನಯಿಸಿದ್ದಾರೆ. ಶ್ರೀನಿಧಿ ಶೆಟ್ಟಿ ನಾಯಕಿಯಾಗಿ, ಸಂಜಯ್ ದತ್, ರವೀನಾ ಟಂಡನ್, ಪ್ರಕಾಶ್ ರಾಜ್ ಮೊದಲಾದವರು ಪ್ರಮುಖ ಪಾತ್ರಗಳಲ್ಲಿ ಅಭಿನಯಿಸಿದ್ದಾರೆ.

'ಕೆಜಿಎಫ್‌–2' ಸಿನಿಮಾ ಬಾಕ್ಸ್‌ ಆಫೀಸ್‌ನಲ್ಲಿ ಹೊಸ ದಾಖಲೆ ಬರೆದಿದೆ. ಈ ಸಿನಿಮಾದ ಹಿಂದಿ ಅವತರಣಿಕೆ ಬರೋಬ್ಬರಿ ₹350 ಕೋಟಿ ಗಳಿಕೆ ಮಾಡಿದೆ ಎಂದು ವರದಿಯಾಗಿದೆ. ಇದರೊಂದಿಗೆ ಹಿಂದಿ ಭಾಷೆಯಲ್ಲಿ ಅತಿಹೆಚ್ಚು ಗಳಿಕೆ ಕಂಡ ಮೂರನೇ ಸಿನಿಮಾ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ.

ಸಿನಿಮಾ ಬಿಡುಗಡೆಯಾದಾಗಿನಿಂದ ಇದುವರೆಗೆ ಒಟ್ಟಾರೆ ₹ 900 ಕೋಟಿ ಗಳಿಕೆ ಮಾಡಿದೆ ಎಂದು ವರದಿಯಾಗಿದೆ.

ಲೋಕೇಶ್ ಕನಕರಾಜ್ ನಿರ್ದೇಶನದ ಕಮಲ್ ಹಾಸನ್ ನಟನೆಯ ‘ವಿಕ್ರಂ’ ಸಿನಿಮಾ ಜೂನ್ 3ರಂದು ಬಿಡುಗಡೆಯಾಗಲಿದೆ.

‘ಇಂಡಿಯನ್ –2’ ಸಿನಿಮಾದಲ್ಲಿ ಕಮಲ್ ಹಾಸನ್ ಕಾಣಿಸಿಕೊಳ್ಳಲಿದ್ದಾರೆ.

ಓದಿ...

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT

ಇನ್ನಷ್ಟು ಸುದ್ದಿ

ಇನ್ನಷ್ಟು
ADVERTISEMENT
ADVERTISEMENT
ADVERTISEMENT
ಪ್ರಜಾವಾಣಿ ವಿಡಿಯೊ
ಸಿನಿಮಾ
ADVERTISEMENT