ಸೋಮವಾರ, 22 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿಕ್ರಮ್ ನಿರ್ದೇಶಕರಿಗೆ ದುಬಾರಿ ಕಾರು ಗಿಫ್ಟ್ ನೀಡಿದ ಕಮಲ್ ಹಾಸನ್

ಅಕ್ಷರ ಗಾತ್ರ

ಬೆಂಗಳೂರು: ಕಮಲ್ ಹಾಸನ್ ನಟನೆಯ ‘ವಿಕ್ರಮ್‘ ಚಿತ್ರ ಬಾಕ್ಸ್ ಆಫೀಸ್‌ನಲ್ಲಿ ಉತ್ತಮ ಗಳಿಕೆಯತ್ತ ಮುನ್ನುಗ್ಗುತ್ತಿದೆ.

ಚಿತ್ರಕ್ಕೆ ಪ್ರೇಕ್ಷಕರ ಪ್ರತಿಕ್ರಿಯೆ ಕಂಡು ನಟ ಕಮಲ್ ಹಾಸನ್, ಅಭಿಮಾನಿಗಳಿಗೆ ಧನ್ಯವಾದ ಅರ್ಪಿಸಿದ್ದರು. ಅಲ್ಲದೆ, ಚಿತ್ರತಂಡ ಮತ್ತು ನಿರ್ಮಾಣ ಹಂತದಲ್ಲಿ ಶ್ರಮಿಸಿದವರಿಗೂ ಧನ್ಯವಾದ ಹೇಳಿದ್ದಾರೆ.

ಈ ಬಾರಿ ಕಮಲ್ ಹಾಸನ್ ಅವರು ವಿಕ್ರಮ್ ಚಿತ್ರದ ನಿರ್ದೇಶಕ ಲೋಕೇಶ್ ಕನಕರಾಜ್ ಅವರಿಗೆ ದುಬಾರಿ ಐಷಾರಾಮಿ ಲೆಕ್ಸಸ್ ಕಾರನ್ನು ಉಡುಗೊರೆ ನೀಡಿದ್ದಾರೆ.

ಅಲ್ಲದೆ, ವಿಕ್ರಮ್ ಚಿತ್ರದಲ್ಲಿ ಸಹಾಯಕ ನಿರ್ದೇಶಕರಾಗಿ ಕೆಲಸ ಮಾಡಿದವರಿಗೆ, ಕಮಲ್ ಹಾಸನ್ ಅವರು ಟಿವಿಎಸ್ ಅಪಾಚೆ ಬೈಕ್ ಉಡುಗೊರೆ ನೀಡಿದ್ದಾರೆ.

ಅಲ್ಲದೆ, ಚಿತ್ರದ ಯಶಸ್ಸಿಗೆ ವಿಜಯ್ ಸೇತುಪತಿ, ಫಹಾದ್ ಫಾಸಿಲ್ ಮತ್ತು ನರೈನ್ ಚೆಂಬನ್ ಕೂಡ ಕಾರಣರಾಗಿದ್ದು, ಅವರಿಗೂ ಧನ್ಯವಾದ ಅರ್ಪಿಸುವುದಾಗಿ ಕಮಲ್ ಹಾಸನ್ ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT