ಬುಧವಾರ, 19 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜುಲೈ 8ಕ್ಕೆ ಒಟಿಟಿಯಲ್ಲಿ ನಟ ಕಮಲ್ ಹಾಸನ್ ಅಭಿನಯದ ‘ವಿಕ್ರಮ್’ ಬಿಡುಗಡೆ

ಅಕ್ಷರ ಗಾತ್ರ

ಚೆನ್ನೈ: ನಟ ಕಮಲ್ ಹಾಸನ್ ಅಭಿನಯದ ‘ವಿಕ್ರಮ್’ ಚಿತ್ರವು ಜುಲೈ 8ರಿಂದ ಒಟಿಟಿಯಲ್ಲಿ ಬಿಡುಗಡೆಯಾಗಲಿದೆ.

‘ಡಿಸ್ನಿ ಪ್ಲಸ್‌’ ಮತ್ತು ‘ಹಾಟ್ ಸ್ಟಾರ್‌’ ಮೂಲಕ ಚಿತ್ರ ವೀಕ್ಷಣೆ ಲಭ್ಯವಾಗಲಿದೆ ಎಂದು ಚಿತ್ರತಂಡ ಮಾಹಿತಿ ನೀಡಿದೆ.

ಲೋಕೇಶ್ ಕನಕರಾಜ್ ನಿರ್ದೇಶನದ ಆಕ್ಷನ್ ಥ್ರಿಲ್ಲರ್ ಸಿನಿಮಾ ಜೂನ್ 3ರಂದು ತಮಿಳು, ತೆಲುಗು, ಮಲಯಾಳಂ, ಕನ್ನಡ ಮತ್ತು ಹಿಂದಿ ಭಾಷೆಗಳಲ್ಲಿ ಬಿಡುಗಡೆಯಾಗಿದ್ದು, ಪ್ರೇಕ್ಷಕರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.

ಈ ಚಿತ್ರದಲ್ಲಿ ಕಮಲ್ ಹಾಸನ್ ಜೊತೆ, ವಿಜಯ್ ಸೇತುಪತಿ, ಫಹಾದ್ ಫಾಸಿಲ್, ಗಾಯತ್ರಿ ಶಂಕರ್, ನರೇನ್, ಸೂರ್ಯ ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ.

ಗಲ್ಲಾ ಪೆಟ್ಟಿಗೆಯಲ್ಲಿ ಸಖತ್ ಸದ್ದುಮಾಡುತ್ತಿರುವ ಈ ಚಿತ್ರ ಇದುವರೆಗೆ ₹409 ಕೋಟಿ ಸಂಗ್ರಹಿಸಿದ್ದು, ಚಿತ್ರಮಂದಿರಗಳಲ್ಲಿ ಯಶಸ್ವಿ ಪ್ರದರ್ಶನ ಕಾಣುತ್ತಿದೆ.

ಇವನ್ನೂ ಓದಿ...

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT