ಬುಧವಾರ, 28 ಫೆಬ್ರುವರಿ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಕನಸೊಂದು ಶುರುವಾಗಿದೆ’ ಎಂದ ಸಾತ್ವಿಕಾ

Published 9 ಜನವರಿ 2024, 18:54 IST
Last Updated 9 ಜನವರಿ 2024, 18:54 IST
ಅಕ್ಷರ ಗಾತ್ರ

‘ಸಹರ’ ಸಿನಿಮಾ ಮೂಲಕ ನಿರ್ದೇಶಕರಾಗಿ ಚಂದನವನಕ್ಕೆ ಹೆಜ್ಜೆ ಇಟ್ಟ ಮಂಜೇಶ್‌ ಭಾಗವತ್‌ ಹೊಸ ಪ್ರಾಜೆಕ್ಟ್‌ ಕೈಗೆತ್ತಿಕೊಂಡಿದ್ದಾರೆ. 

ಮಂಜೇಶ್ ನಿರ್ದೇಶನದ ಎರಡನೇ ಸಿನಿಮಾಗೆ ‘ಕನಸೊಂದು ಶುರುವಾಗಿದೆ’ ಎಂದು ಶೀರ್ಷಿಕೆ ಇಡಲಾಗಿದ್ದು, ಅಶ್ವಿನಿ ಪುನೀತ್ ರಾಜ್‌ಕುಮಾರ್‌ ಈ ಶೀರ್ಷಿಕೆ ಬಿಡುಗಡೆ ಮಾಡಿ ಚಿತ್ರತಂಡಕ್ಕೆ ಶುಭ ಕೋರಿದ್ದಾರೆ. ಈ ಸಿನಿಮಾ ಮೂಲಕ ಸಂತೋಷ್ ಬಿಲ್ವಾ ನಾಯಕನಾಗಿ ಅದೃಷ್ಟ ಪರೀಕ್ಷೆಗಿಳಿದಿದ್ದು, ಅವರಿಗೆ ಜೋಡಿಯಾಗಿ ಸಾತ್ವಿಕಾ ಕಾಣಿಸಿಕೊಂಡಿದ್ದಾರೆ. ಥ್ರಿಲ್ಲರ್ ಮಂಜು, ಕುರಿ ಸುನಿಲ್ ತಾರಾಬಳಗದಲ್ಲಿದ್ದಾರೆ. ಸಸ್ಪೆನ್ಸ್ ಥ್ರಿಲ್ಲರ್ ಕಥಾಹಂದರದ ಈ ಚಿತ್ರದ ಚಿತ್ರೀಕರಣ ಬೆಂಗಳೂರು, ಕುಂದಾಪುರ, ಕುಣಿಗಲ್ ಸುತ್ತಮುತ್ತ ನಡೆದಿದೆ. 

ಕೆಕೆಆರ್‌ ಮೀಡಿಯಾ ಬ್ಯಾನರ್‌ನಡಿ ಲಕ್ಷ್ಮೀಕಾಂತ್ ರೆಡ್ಡಿ ಎಸ್. ಈ ಸಿನಿಮಾ ನಿರ್ಮಾಣ ಮಾಡಿದ್ದಾರೆ. ಲೋಕೇಂದ್ರ ಸೂರ್ಯ ಛಾಯಾಚಿತ್ರಗ್ರಹಣ, ಸೂರಜ್ ಜೋಯಿಸ್ ಸಂಗೀತ, ದೀಪಕ್ ಸಿ. ಎಸ್. ಗೌಡ ಸಂಕಲನ ಚಿತ್ರಕ್ಕಿದೆ. ಶಶಾಂಕ್, ಸಿಂಪಲ್ ಸುನಿ ಹಾಗೂ ಪ್ರಮೋದ್ ಮರವಂತೆ ಚಿತ್ರದ ಹಾಡುಗಳಿಗೆ ಸಾಹಿತ್ಯ ಬರೆದಿದ್ದು, ಸೋನು ನಿಗಮ್‌, ರಾಜೇಶ್ ಕೃಷ್ಣನ್ ಹಾಗೂ ವಾಸುಕಿ ವೈಭವ್ ಹಾಡುಗಳಿಗೆ ಧ್ವನಿಯಾಗಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT