ಶುಕ್ರವಾರ, 10 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನೂಪುರ್ ಶರ್ಮಾ ಅವರಿಗೆ ತಮ್ಮ ಅಭಿಪ್ರಾಯ ವ್ಯಕ್ತಪಡಿಸುವ ಹಕ್ಕಿದೆ: ಕಂಗನಾ ರನೌತ್

Last Updated 7 ಜೂನ್ 2022, 15:55 IST
ಅಕ್ಷರ ಗಾತ್ರ

ಮುಂಬೈ: ಬಾಲಿವುಡ್ ನಟಿ ಕಂಗನಾ ರನೌತ್ ಅವರು, ಅಮಾನತುಗೊಂಡಿರುವ ಬಿಜೆಪಿ ರಾಷ್ಟ್ರೀಯ ವಕ್ತಾರೆ ನೂಪುರ್ ಶರ್ಮಾ ಪರ ಧ್ವನಿ ಎತ್ತಿದ್ದಾರೆ. ಅವರಿಗೆ(ನೂಪುರ್) ತಮ್ಮ ಅಭಿಪ್ರಾಯ ವ್ಯಕ್ತಪಡಿಸುವ ಹಕ್ಕಿದೆ ಎಂದು ಕಂಗನಾ ಹೇಳಿದ್ದಾರೆ.

ಪ್ರವಾದಿ ಮಹಮ್ಮದ್ ಅವರ ಬಗ್ಗೆ ಟಿವಿ ಚರ್ಚೆಯೊಂದರಲ್ಲಿ ಆಕ್ಷೇಪಾರ್ಹ ಹೇಳಿಕೆ ನೀಡಿದ್ದ ವಿವಾದದ ಹಿನ್ನೆಲೆಯಲ್ಲಿ ಭಾನುವಾರ ನೂಪುರ್ ಶರ್ಮಾ ಅವರನ್ನು ಬಿಜೆಪಿ ರಾಷ್ಟ್ರೀಯ ವಕ್ತಾರೆ ಸ್ಥಾನದಿಂದ ಅಮಾನತು ಮಾಡಲಾಗಿತ್ತು. ಗಲ್ಫ್ ದೇಶಗಳಲ್ಲಿ ಈ ಬಗ್ಗೆ ಪ್ರತಿಭಟನೆ ಹೆಚ್ಚಾದ ಹಿನ್ನೆಲೆಯಲ್ಲಿ ಬಿಜೆಪಿ ಈ ಕ್ರಮ ಕೈಗೊಂಡಿತ್ತು.

ನೂಪುರ್ ಶರ್ಮಾ ಅವರಿಗೆ ಜೀವ ಬೆದರಿಕೆ ಬರುತ್ತಿರುವ ಬಗ್ಗೆ ತಮ್ಮ ಇನ್‌ಸ್ಟಾಗ್ರಾಮ್ ಪೋಸ್ಟ್‌ನಲ್ಲಿ ಕಿಡಿಕಾರಿರುವ ಕಂಗನಾ, ಅವರ ಹೇಳಿಕೆ ಬಗ್ಗೆ ನಿಮಗೆ ಆಕ್ಷೇಪವಿದ್ದರೆ ಕಾನೂನಿನ ಮೂಲಕ ಮುಂದುವರಿಯಿರಿ ಎಂದು ಹೇಳಿದ್ದಾರೆ.

‘ನೂಪುರ್ ಅವರಿಗೆ ತಮ್ಮ ಅಭಿಪ್ರಾಯ ವ್ಯಕ್ತಪಡಿಸುವ ಹಕ್ಕಿದೆ. ಅವರಿಗೆ ಎಲ್ಲ ರೀತಿಯ ಬೆದರಿಕೆ ಬರುತ್ತಿರುವುದನ್ನು ನಾನು ಗಮನಿಸಿದ್ದೇನೆ. ಹಿಂದೂ ದೇವರನ್ನು ಅಪಮಾನಿಸಿದ ಪ್ರಕರಣಗಳಲ್ಲಿ ನ್ಯಾಯಾಲಯದಲ್ಲಿ ನಿತ್ಯವೂ ವಿಚಾರಣೆ ನಡೆಯುತ್ತಿದೆ. ನೀವೂ ಸಹ ಅದನ್ನೇ ಮಾಡಿ. ಅದನ್ನು ಬಿಟ್ಟು ಡಾನ್‌ಗಳ ರೀತಿ ವರ್ತಿಸುವ ಅಗತ್ಯ ಇಲ್ಲ’ ಎಂದು ನಟಿ ಹೇಳಿದ್ದಾರೆ.

‘ಇದು ಅಫ್ಗಾನಿಸ್ತಾನ ಅಲ್ಲ, ನಮ್ಮಲ್ಲಿ ಪ್ರಜಾಪ್ರಭುತ್ವ ಎಂಬ ಪ್ರಕ್ರಿಯೆ ಮೂಲಕ ಅಸ್ತಿತ್ವಕ್ಕೆ ಬಂದಿರುವ ಕ್ರಮಬದ್ಧವಾಗಿ ಕಾರ್ಯನಿರ್ವಹಿಸುವ ಸರ್ಕಾರವಿದೆ. ಇದನ್ನು ಪದೇ ಪದೇ ಮರೆಯುತ್ತಲೇ ಇರುವ ಜನರಿಗೆ ಮತ್ತೆ ನೆನಪು ಮಾಡುತ್ತಿದ್ದೇನೆ’ ಎಂದು ಬರೆದುಕೊಂಡಿದ್ದಾರೆ.

ಜೀವ ಬೆದರಿಕೆ ಹಿನ್ನೆಲೆಯಲ್ಲಿ ನೂಪುರ್ ಶರ್ಮಾ ಅವರಿಗೆ ದೆಹಲಿ ಪೊಲೀಸರು ಭದ್ರತೆ ಒದಗಿಸಿದ ಕೆಲ ಗಂಟೆಗಳ ಬಳಿಕ ಕಂಗನಾ ಅವರು ಈ ಹೇಳಿಕೆ ಪೋಸ್ಟ್ ಮಾಡಿದ್ದಾರೆ.

ಇವನ್ನೂ ಓದಿ..

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT