ಭಾನುವಾರ, ಆಗಸ್ಟ್ 1, 2021
23 °C

ಸ್ವರ್ಣ ಮಂದಿರಕ್ಕೆ ಭೇಟಿ ನೀಡಿದ ನಟಿ ಕಂಗನಾ ರಣಾವತ್

ಪ್ರಜಾವಾಣಿ ವೆಬ್ ಡೆಸ್ಕ್‌ Updated:

ಅಕ್ಷರ ಗಾತ್ರ : | |

ನವದೆಹಲಿ: ಬಾಲಿವುಡ್ ನಟಿ ಕಂಗನಾ ರಣಾವತ್ ಸೋಮವಾರ ಅಮೃತಸರದ ಪ್ರಸಿದ್ಧ ಶ್ರೀ ಹರ್ಮಂದಿರ್ ಸಾಹಿಬ್ ಸ್ವರ್ಣ ಮಂದಿರಕ್ಕೆ ಭೇಟಿ ನೀಡಿ ಗುರುನಾನಕ್ ದೇವ್ ಅವರ ಆಶೀರ್ವಾದ ಪಡೆದಿದ್ದಾರೆ.

ಬಳಿಕ ತಮ್ಮ ಇನ್‌ಸ್ಟಾಗ್ರಾಂ ಪುಟದಲ್ಲಿ ಅಭಿಮಾನಿಗಳಿಗಾಗಿ ಚಿತ್ರವನ್ನು ಹಂಚಿಕೊಂಡಿದ್ದಾರೆ.

ಇದನ್ನೂ ಓದಿ: 

ಇದೇ ಮೊದಲ ಬಾರಿಗೆ ಗೋಲ್ಡನ್ ಟೆಂಪಲ್‌ಗೆ ಭೇಟಿ ನೀಡುತ್ತಿರುವುದಾಗಿ 34ರ ಹರೆಯದ ನಟಿ ಹೇಳಿದ್ದಾರೆ.

ಸ್ವರ್ಣ ಮಂದಿರದ ಸೌಂದರ್ಯಕ್ಕೆ ತಾವು ಬೆರಗಾಗಿದ್ದು, ವರ್ಣಿಸಲು ಪದಗಳೇ ಸಿಗುತ್ತಿಲ್ಲ ಎಂದು ನಟಿ ಬರೆದುಕೊಂಡಿದ್ದಾರೆ.

ನಾಲ್ಕು ಬಾರಿಯ ರಾಷ್ಟ್ರೀಯ ಪ್ರಶಸ್ತಿ ವಿಜೇತೆ, ಸಿಖ್ ಧರ್ಮದ ಸಂಪ್ರದಾಯದಂತೆ ಉಡುಪು ಧರಿಸಿ ಸ್ವರ್ಣ ಮಂದಿರಕ್ಕೆ ನಟಿ ಭೇಟಿ ನೀಡಿದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು