ಶನಿವಾರ, ಸೆಪ್ಟೆಂಬರ್ 26, 2020
27 °C

ಸುಶಾಂತ್ ಸಿಂಗ್ ಸಾವಿನ ಪ್ರಕರಣ: ಸಿಬಿಐ ತನಿಖೆಗೆ ಕಂಗನಾ ಒತ್ತಾಯ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ನವದೆಹಲಿ: ಬಾಲಿವುಡ್‌ ನಟ ಸುಶಾಂತ್ ಸಿಂಗ್ ರಜಪೂತ್ ಅವರ ಸಾವಿನ ಪ್ರಕರಣವನ್ನು ಸಿಬಿಐ ತನಿಖೆಗೆ ಒಪ್ಪಿಸಬೇಕು ಎಂಬ ಕೂಗು ವ್ಯಾಪಕವಾಗಿ ಕೇಳಿಬಂದಿದೆ. ಇದೀಗ ನಟಿ ಕಂಗನಾ ರನೌತ್‌ ಅವರೂ ಅದಕ್ಕಾಗಿ ದನಿಗೂಡಿಸಿದ್ದಾರೆ.

ಈ ಸಂಬಂಧ ವಿಡಿಯೊವೊಂದನ್ನು ಹಂಚಿಕೊಂಡಿರುವ ಕಂಗನಾ, ಸತ್ಯವೇನೆಂಬುದನ್ನು ಬಿಚ್ಚಿಡುವ ಸಲುವಾಗಿ ಸಿಬಿಐ ತನಿಖೆ ನಡೆಯಬೇಕು ಎಂದು ಒತ್ತಾಯಿಸಿದ್ದಾರೆ.

‘ಸುಶಾಂತ್‌ ಸಿಂಗ್‌ ರಜಪೂತ್‌ಗಾಗಿ ನಾವು ಸಿಬಿಐ ತನಿಖೆಯನ್ನು ಬಯಸುತ್ತಿದ್ದೇವೆ. ನಾವು ಸತ್ಯವನ್ನು ತಿಳಿಯುವ ಅರ್ಹತೆಯನ್ನು ಹೊಂದಿದ್ದೇವೆ’ ಎಂದು ವಿಡಿಯೊದಲ್ಲಿ ಹೇಳಿದ್ದಾರೆ.

ಮುಂಬೈನಲ್ಲಿರುವ ಬಾಂದ್ರಾ ನಿವಾಸದಲ್ಲಿ ಜೂನ್‌ 14ರಂದು ಸುಶಾಂತ್‌ ಅವರ ಮೃತದೇಹ ಪತ್ತೆಯಾಗಿತ್ತು. ಅವರ ಮರಣಾನಂತರ ಬಾಲಿವುಡ್‌ ಅಂಗಳದಲ್ಲಿನ ಸ್ವಜನ ಪಕ್ಷಪಾತದ ಚರ್ಚೆ ಮುನ್ನೆಲೆಗೆ ಬಂದಿತ್ತು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು