ಸೋಮವಾರ, ಸೆಪ್ಟೆಂಬರ್ 20, 2021
29 °C

ಮಾನನಷ್ಟ ಮೊಕದ್ದಮೆ: ಕಂಗನಾ ಅರ್ಜಿ ಆದೇಶ ಕಾಯ್ದಿರಿಸಿದ ಕೋರ್ಟ್‌

ಪ್ರಜಾವಾಣಿ ವೆಬ್‌ ಡೆಸ್ಕ್‌‌ Updated:

ಅಕ್ಷರ ಗಾತ್ರ : | |

ಮುಂಬೈ: ತಮ್ಮ ವಿರುದ್ಧ ದಾಖಲಾಗಿರುವ ಮಾನನಷ್ಟ ಮೊಕದ್ದಮೆಯನ್ನು ರದ್ದುಗೊಳಿಸುವಂತೆ ಕೋರಿ ನಟಿ ಕಂಗನಾ ಸಲ್ಲಿಸಿದ್ದ ಅರ್ಜಿಯ ಆದೇಶವನ್ನು ಬಾಂಬೆ ಹೈಕೋರ್ಟ್‌ ಕಾಯ್ದಿರಿಸಿದೆ.

ಖ್ಯಾತ ಲೇಖಕ ಮತ್ತು ಗೀತ ರಚನೆಕಾರ ಜಾವೇದ್ ಅಖ್ತರ್ ಅವರು ಕಂಗನಾ ವಿರುದ್ಧ ಕಳೆದ ನವೆಂಬರ್‌ನಲ್ಲಿ ಅಂಧೇರಿ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ನ್ಯಾಯಾಲಯದಲ್ಲಿ ಕ್ರಿಮಿನಲ್‌ ಮೊಕದ್ದಮೆ ದಾಖಲಿಸಿದ್ದರು.

ನ್ಯಾಯಮೂರ್ತಿ ರೇವತಿ ಮೋಹಿತೆ ಡೆರೆ ನೇತೃತ್ವದ ಏಕಸದಸ್ಯ ಪೀಠ ಅರ್ಜಿಯ ವಿಚಾರಣೆ ನಡೆಸಿತು.

‘ಅಖ್ತರ್‌ ದೂರಿನ ಅನ್ವಯ ಪೊಲೀಸರು ನಡೆಸಿರುವ ತನಿಖೆ ಏಕಪಕ್ಷೀಯವಾಗಿದೆ. ನನ್ನ ಕಕ್ಷಿದಾರರ ವಿಚಾರಣೆಯನ್ನೇ ನಡೆಸಿಲ್ಲ’ ಎಂದು ಕಂಗನಾ ಪರ ವಕೀಲರಾದ ಸಿದ್ದಿಕಿ ಹೈಕೋರ್ಟ್‌ಗೆ ತಿಳಿಸಿದರು.

‘ಅಖ್ತರ್ ಅವರ ದೂರಿನ ಜತೆಗೆ ಸಂದರ್ಶನದ ಆಯ್ದ ಭಾಗಗಳನ್ನು ಪರಿಶೀಲಿಸಿದ ನಂತರವೇ ನ್ಯಾಯಾಧೀಶರು ಪೊಲೀಸ್ ತನಿಖೆಗೆ ಆದೇಶಿಸಿದ್ದಾರೆ. ಇದರಲ್ಲಿ ಕಂಗನಾ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ’ ಎಂದು ಜಾವೇದ್‌ ಅಖ್ತರ್‌ ಪರ ವಕೀಲ ಜೈ ಕುಮಾರ್‌ ಭಾರಧ್ವಜ್‌ ಅವರು ನ್ಯಾಯಾಲಯಕ್ಕೆ ತಿಳಿಸಿದರು.

‘ನಿಷ್ಪಕ್ಷಪಾತವಾಗಿ ವಿಚಾರಣೆ ನಡೆಸುವ ಸಲುವಾಗಿಯೇ ಈ ಹಿಂದೆ ಕಂಗನಾ ಅವರಿಗೆ ವಿಚಾರಣೆಗೆ ಹಾಜರಾಗುವಂತೆ ಸಮನ್ಸ್‌ ನೀಡಲಾಗಿತ್ತು. ಆದರೆ ಅವರು ಅದಕ್ಕೆ ಪ್ರತಿಕ್ರಿಯಿಸಿರಲಿಲ್ಲ’ ಎಂದು ಹೇಳಿದರು.

ಕಂಗನಾ ಸಲ್ಲಿಸಿರುವ ಅರ್ಜಿ ಸಂಬಂಧ, ಸೆಪ್ಟೆಂಬರ್‌ 9ರಂದು ಬಾಂಬೆ ಹೈಕೋರ್ಟ್‌ ಆದೇಶ ನೀಡುವ ಸಾಧ್ಯತೆ ಇದೆ.

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು