ಭಾನುವಾರ, 3 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಜಕೀಯಕ್ಕೆ ಕಂಗನಾ ರನೌತ್?: ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧೆ ಸಾಧ್ಯತೆ

Published 21 ಡಿಸೆಂಬರ್ 2023, 7:17 IST
Last Updated 21 ಡಿಸೆಂಬರ್ 2023, 7:17 IST
ಅಕ್ಷರ ಗಾತ್ರ

ನವದೆಹಲಿ: ಇತ್ತೀಚೆಗೆ ಬಿಜೆಪಿಯ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರು ಬಾಲಿವುಡ್‌ ನಟಿ ಕಂಗನಾ ರನೌತ್ ಅವರನ್ನು ಭೇಟಿಯಾಗಿದ್ದು, ಕಂಗನಾ ರಾಜಕೀಯ ಪ್ರವೇಶದ ಕುರಿತ ಹಲವು ಊಹಾಪೋಹಗಳಿಗೆ ಇನ್ನಷ್ಟು ಪುಷ್ಟಿ ನೀಡಿದೆ.

ಹೌದು... ಕೃಷ್ಣನ ಆಶೀರ್ವಾದವಿದ್ದರೆ ಮುಂದಿನ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸುತ್ತೇನೆ ಎಂದು ಸ್ವತಃ ಕಂಗನಾ ಅವರೇ ಹೇಳಿದ್ದರು. ಆ ಮೂಲಕ ತಮ್ಮ ರಾಜಕೀಯ ಪ್ರವೇಶದ ಕುರಿತು ಸಣ್ಣ ಸುಳಿವು ನೀಡಿದ್ದರು. ಬಿಜೆಪಿ ಕಾರ್ಯಕ್ರಮಗಳ ಬಗ್ಗೆ ಉತ್ತಮ ಅಭಿಪ್ರಾಯ ವ್ಯಕ್ತಪಡಿಸುತ್ತಿದ್ದ ಅವರು ‘ಮೋದಿ ಅಭಿಮಾನಿ ನಾನು’ ಎಂದೂ ಹೇಳಿಕೊಂಡಿದ್ದರು. ಅಲ್ಲದೇ ಮಾಜಿ ಪ್ರಧಾನಿ ಇಂದಿರಾ ಗಾಂಧಿ ಜೀವನಾಧಾರಿತ ಕುರಿತ ಸಿನಿಮಾ ‘ಎಮರ್ಜೆನ್ಸಿ’ಯಲ್ಲಿ ನಟಿಸುವ ಮೂಲಕ ಪಕ್ಷದ ವರಿಷ್ಠರ ಗಮನಸೆಳೆದಿದ್ದಾರೆ.

ಕಂಗನಾ ತಂದೆ ಅಮರ್ ದೀಪ್‌ ಕೂಡ ಮಗಳ ರಾಜಕೀಯ ಪ್ರವೇಶದ ಬಗ್ಗೆ ಖಚಿತಪಡಿಸಿದ್ದಾರೆ. ‘ಮುಂದಿನ ವರ್ಷದ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸುವ ಮೂಲಕ ಮಗಳು ರಾಜಕೀಯ ಪ್ರವೇಶ ಮಾಡಲಿದ್ದಾಳೆ. ಬಿಜೆಪಿಯಿಂದ ಮಾತ್ರ ಸ್ಪರ್ಧಿಸುತ್ತಾಳೆ’ ಎಂದು ಅವರು ಹೇಳಿದ್ದಾರೆ ಎಂದು ‘ಡೆಕ್ಕನ್ ಹೆರಾಲ್ಡ್‌’ ವರದಿ ಮಾಡಿದೆ.

ಬಾಲಿವುಡ್ ನಟಿಯರು ರಾಜಕೀಯದಲ್ಲಿ ತಮ್ಮ ಭವಿಷ್ಯ ಕಂಡುಕೊಳ್ಳುತ್ತಿರುವುದು ಇದೇ ಮೊದಲೇನಲ್ಲ. ಈಗಾಗಲೇ ನಟಿಯರಾದ ಹೇಮಾ ಮಾಲಿನಿ, ಸ್ಮೃತಿ ಇರಾನಿ, ಜಯಾ ಬಚ್ಚನ್‌ ಸೇರಿದಂತೆ ಹಲವು ನಟಿಯರು ರಾಜಕಾರಣದಲ್ಲಿ ಸಕ್ರಿಯರಾಗಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT