ಮುಂಬೈ: ಬಾಲಿವುಡ್ ನಟಿ ಕಂಗನಾ ರಣೌತ್ ಟ್ವಿಟರ್ ಖಾತೆಯನ್ನು ಸ್ಥಗಿತಗೊಳಿಸಲಾಗಿದೆ. ಸದಾ ಒಂದಿಲ್ಲೊಂದು ಪೋಸ್ಟ್ ಮೂಲಕ ಸುದ್ದಿ ಹಾಗೂ ವಿವಾದದಲ್ಲಿರುವ ಕಂಗನಾ ಅವರ ಖಾತೆಯನ್ನು ತನ್ನ ನಿಯಮ ಉಲ್ಲಂಘಿಸಿದ್ದಕ್ಕಾಗಿ ಸ್ಥಗಿತಗೊಳಿಸಲಾಗಿದೆ ಎಂದು ಟ್ವಿಟರ್ ಹೇಳಿದೆ.

ಭಾನುವಾರ ಪಶ್ಚಿಮ ಬಂಗಾಳದ ಚುನಾವಣೆ ಫಲಿತಾಂಶದ ಬಳಿಕ ಹಿಂಸಾಚಾರ ಭುಗಿಲೆದ್ದಿತ್ತು. ತೃಣಮೂಲ ಕಾಂಗ್ರೆಸ್ ಭರ್ಜರಿ ಜಯ ಗಳಿಸಿತ್ತು. ಹಿಂಸಾಚಾಚಾರ ಎದ್ದಾಗ ಸರಣಿ ಟ್ವೀಟ್ ಮಾಡಿದ್ದ ಕಂಗನಾ, ಇಲ್ಲಿ ರಾಷ್ಟ್ರಪತಿ ಆಳ್ವಿಕೆ ಹೇರಬೇಕು ಎಂದೂ ಒತ್ತಾಯಿಸಿದ್ದರು.

ಖಾತೆ ನಿಷ್ಕ್ರಿಯಗೊಳ್ಳುವ ಕೆಲವೇ ನಿಮಿಷಗಳ ಹಿಂದಷ್ಟೇ ಕಂಗನಾ ವಿಡಿಯೋ ಒಂದನ್ನು ಪೋಸ್ಟ್ ಮಾಡಿದ್ದರು. ಈ ವಿಡಿಯೋದಲ್ಲಿ ‘ಪಶ್ಚಿಮ ಬಂಗಾಳದಲ್ಲಿ ಜನರ ಹತ್ಯೆ ನಡೆಯುತ್ತಿದೆ. ಅತ್ಯಾಚಾರ ನಡೆಯುತ್ತಿದೆ. ಮನೆಗಳನ್ನು ಸುಡಲಾಗುತ್ತಿದೆ ಈ ಬಗ್ಗೆ ಯಾರೂ ಮಾತನಾಡುತ್ತಿಲ್ಲ’ ಎಂದು ಆರೋಪಿಸಿದ್ದರು.

ಜನವರಿಯಲ್ಲೂ ಕೂಡಾ ಕಂಗನಾ ಅವರು ಟ್ವಿಟರ್ನಲ್ಲಿ ಪೋಸ್ಟ್ಗಳನ್ನು ಪ್ರಕಟಿಸಿ ವಿವಾದ ಮೈಮೇಲೆ ಎಳೆದುಕೊಂಡಿದ್ದರು. ಆಗಲೇ ಅವರಿಗೆ ಟ್ವಿಟರ್ ಎಚ್ಚರಿಕೆ ನೀಡಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.