ಶುಕ್ರವಾರ, 12 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಸೆ.6ಕ್ಕೆ ಕಂಗನಾ ರನೌತ್‌ ನಟನೆಯ ‘ಎಮರ್ಜೆನ್ಸಿ’ ಚಿತ್ರ ಬಿಡುಗಡೆ

Published 25 ಜೂನ್ 2024, 6:18 IST
Last Updated 25 ಜೂನ್ 2024, 6:18 IST
ಅಕ್ಷರ ಗಾತ್ರ

ನವದೆಹಲಿ: ನಟಿ, ಲೋಕಸಭಾ ಸಂಸದೆ ಕಂಗನಾ ರನೌತ್‌ ನಿರ್ದೇಶಿಸಿ ನಟಿಸಿರುವ ‘ಎಮರ್ಜೆನ್ಸಿ’ ಚಿತ್ರ ಸೆಪ್ಟೆಂಬರ್‌ 6ರಂದು ತೆರೆಗೆ ಬರುತ್ತಿದೆ.

ಈ ಹಿಂದೆ 2023ರ ನವೆಂಬರ್‌ 24ರಂದು ಚಿತ್ರ ಬಿಡುಗಡೆಯಾಗಬೇಕಿತ್ತು. ಆದರೆ ಕಂಗನಾ ಚುನಾವಣೆಗೆ ಸ್ಪರ್ಧಿಸಿದ್ದ ಕಾರಣ ದಿನಾಂಕವನ್ನು ಮುಂದೂಡಲಾಗಿತ್ತು.

ಚಿತ್ರದಲ್ಲಿ ಕಂಗನಾ ಇಂದಿರಾ ಗಾಂಧಿ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.

ಈ ಕುರಿತು ಎಕ್ಸ್‌ನಲ್ಲಿ ಪೋಸ್ಟ್‌ ಹಂಚಿಕೊಂಡಿರುವ ಕಂಗನಾ, ‘ಸ್ವತಂತ್ರ ಭಾರತದ ಕರಾಳ ಅಧ್ಯಾಯದ 50ನೇ ವರ್ಷ ಆರಂಭವಾಗುವ ದಿನದಂದೇ ಎಮರ್ಜೆನ್ಸಿ ಚಿತ್ರದ ಬಿಡುಗಡೆ ದಿನಾಂಕ ಘೋಷಣೆಯಾಗುತ್ತಿದೆ’ ಎಂದು ಬರೆದುಕೊಂಡಿದ್ದಾರೆ. 

ಚಿತ್ರದಲ್ಲಿ ಅನುಪಮ್‌ ಖೇರ್‌, ಮಹಿಮಾ ಚೌಧರಿ, ಮಿಲಿಂದ್‌ ಸೋಮನ್‌, ಶ್ರೇಯಸ್‌ ತಲ್ಪಡೆ, ವಿಶಾಖ್‌ ನಾಯರ್‌ ಸೇರಿದಂತೆ ಹಲವು ಕಲಾವಿದರು ಕಾಣಿಸಿಕೊಂಡಿದ್ದಾರೆ. ಜೀ ಸ್ಟುಡಿಯೋ ಮತ್ತು ಕಂಗಾನ ಅವರ ಮಣಿಕರ್ಣಿಕಾ ಫಿಲ್ಮ್ಂ ಚಿತ್ರವನ್ನು ನಿರ್ಮಾಣ ಮಾಡಿದೆ.

ಹಿಮಾಚಲ ಪ್ರದೇಶದ ಮಂಡಿ ಲೋಕಸಭಾ ಕ್ಷೇತ್ರದ ಬಿಜೆಪಿ ಸಂಸದೆಯಾಗಿ ಕಂಗನಾ ನಿನ್ನೆ (ಸೋಮವಾರ) ಪ್ರಮಾಣ ವಚನ ಸ್ವೀಕರಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT