ಭಾನುವಾರ, ಅಕ್ಟೋಬರ್ 24, 2021
21 °C

ಮೊಕದ್ದಮೆ ವರ್ಗಾಯಿಸುವಂತೆ ಕೋರಿದ್ದ ಕಂಗನಾ ಅರ್ಜಿ ಮಾನ್ಯತೆ ಇಲ್ಲದ್ದು: ಜಾವೇದ್

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ಮುಂಬೈ: ನಟಿ ಕಂಗನಾ ರನೌತ್‌ ತಮ್ಮ ವಿರುದ್ಧ ದಾಖಲಿಸಿರುವ ಕ್ರಿಮಿನಲ್‌ ಮಾನನಷ್ಟ ಮೊಕದ್ದಮೆಯನ್ನು ವರ್ಗಾಯಿಸುವಂತೆ ಕೋರಿರುವ ಅರ್ಜಿಯು ಯಾವುದೇ ಮಾನ್ಯತೆ ಹೊಂದಿಲ್ಲ ಎಂದು ಗೀತರಚನೆಕಾರ ಜಾವೇದ್‌ ಅಖ್ತರ್‌ ನ್ಯಾಯಾಲಯದಲ್ಲಿ ಶುಕ್ರವಾರ ಹೇಳಿಕೆ ದಾಖಲಿಸಿದ್ದಾರೆ.

ಇದು ವಿಚಾರಣೆಯನ್ನು ವಿಳಂಬಗೊಳಿಸುವ ನಟಿಯ ತಂತ್ರವಾಗಿದೆ ಎಂದೂ ಅವರು ಅಭಿಪ್ರಾಯಪಟ್ಟಿದ್ದಾರೆ.

ಮಾನನಷ್ಟ ಮೊಕದ್ದಮೆಯ ವಿಚಾರಣೆಯನ್ನು ಮತ್ತೊಂದು ನ್ಯಾಯಾಲಯಕ್ಕೆ ವರ್ಗಾಯಿಸುವಂತೆ ರನೌತ್‌‌ ಕಳೆದ ತಿಂಗಳು ಮುಖ್ಯ ಮೆಟ್ರೊಪಾಲಿಟನ್‌ ಮ್ಯಾಜಿಸ್ಟ್ರೇಟರಿಗೆ ಅರ್ಜಿ ಸಲ್ಲಿಸಿದ್ದರು.

ಮ್ಯಾಜಿಸ್ಟ್ರೇಟ್‌ ನ್ಯಾಯಾಲಯದ ವಿಚಾರಣೆಯ ವಿರುದ್ಧ ನಟಿ ಸಲ್ಲಿಸಿದ ಹಲವು ಅರ್ಜಿಗಳನ್ನು ಸೆಷನ್ಸ್‌ ನ್ಯಾಯಾಲಯ ಮತ್ತು ಬಾಂಬೆ ಹೈಕೋರ್ಟ್‌ ತಿರಸ್ಕರಿಸಿವೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು