ಬೆಂಗಳೂರು: ತೀವ್ರ ಎದೆನೋವು ಕಾಣಿಸಿಕೊಂಡ ಕಾರಣ ಕನ್ನಡ ಚಿತ್ರರಂಗದ ಹಿರಿಯ ನಟ ಬ್ಯಾಂಕ್ ಜನಾರ್ದನ್ ಅವರನ್ನು ಮಂಗಳವಾರ ಆಸ್ಪತ್ರೆಗೆ ದಾಖಲಿಸಲಾಗಿದೆ.
‘ಎದೆನೋವು ಕಾಣಿಸಿಕೊಂಡಿದ್ದರಿಂದ ನಗರದ ವಿಕ್ರಂ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆಂಜಿಯೋಗ್ರಾಮ್ ಮಾಡಲಾಗಿದ್ದು, ಯಾವುದೇ ತೊಂದರೆ ಕಂಡು ಬಂದಿಲ್ಲ. ಐಸಿಯುನಲ್ಲಿ ಇರಿಸಲಾಗಿದೆ. ಪ್ರಸ್ತುತ ಅವರು ಚೇತರಿಸಿಕೊಂಡು ಆರೋಗ್ಯವಾಗಿದ್ದಾರೆ. ಆತಂಕಪಡುವ ಅಗತ್ಯವಿಲ್ಲ’ ಎಂದು ಅವರ ಕುಟುಂಬದ ಮೂಲಗಳು ತಿಳಿಸಿವೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.