ಮೈಸೂರು: ನಟ ದರ್ಶನ್ ಅವರು ಹೋಟೆಲ್ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿದ್ದಾರೆ ಎನ್ನಲಾದ ಪ್ರಕರಣಕ್ಕೆ ಸಂಬಂಧಿಸಿದಂತೆ ದೇವರಾಜ ಉಪವಿಭಾಗದ ಎಸಿಪಿ ಶಶಿಧರ್ ನೇತೃತ್ವದಲ್ಲಿ ಪೊಲೀಸರು ಶುಕ್ರವಾರ ‘ಸಂದೇಶ್ ದ ಪ್ರಿನ್ಸ್‘ ಹೋಟೆಲ್‌ಗೆ ಭೇಟಿ ನೀಡಿ ಸಿಸಿಟಿವಿ ಕ್ಯಾಮೆರಾದ ದೃಶ್ಯಾವಳಿಗಳನ್ನು ವಶಕ್ಕೆ ಪಡೆದರು.
ಹಲ್ಲೆಗೆ ಒಳಗಾದರು ಎನ್ನಲಾದ ಹೋಟೆಲ್ ಸಿಬ್ಬಂದಿ ಗಂಗಾಧರ್ ಹಾಗೂ ಮಾಲೀಕ ಸಂದೇಶ್ ನಾಗರಾಜ್ ಅವರ ಪುತ್ರ ಸಂದೇಶ್ ಅವರನ್ನು ವಿಚಾರಣೆ ನಡೆಸಿದರು ಎಂದು ಮೂಲಗಳು ತಿಳಿಸಿವೆ.
ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಗಂಗಾಧರ್, ‘ನಮ್ಮದು ನಾಯರ್ ಸಮುದಾಯ. ಸರ್ವೀಸ್ ತಡವಾಗಿದ್ದರಿಂದ ನಟ ದರ್ಶನ್ ಏರುದನಿಯಲ್ಲಿ ಮಾತನಾಡಿದರು. ಹಲ್ಲೆ ನಡೆಸಿಲ್ಲ’ ಎಂದು ಹೇಳಿದರು.
ಸಂದೇಶ್ ಪ್ರತಿಕ್ರಿಯಿಸಿ, ‘ದರ್ಶನ್ ಮತ್ತು ಇಂದ್ರಜಿತ್ ಈ ವಿಚಾರವನ್ನು ಇಲ್ಲಿಗೆ ಬಿಟ್ಟರೆ ನನಗೂ ಒಳ್ಳೆಯದು, ಅವರಿಗೂ ಒಳ್ಳೆಯದು. ವಿವಾದ
ದಿಂದ ಕಾರ್ಮಿಕರು ಕೆಲಸಕ್ಕೆ ಬರುವುದಿಲ್ಲ ಎನ್ನುತ್ತಿದ್ದಾರೆ. ಲಸಿಕೆ ತೆಗೆದುಕೊಂಡ ಕಾರ್ಮಿಕರು ಸಿಗುತ್ತಿಲ್ಲ. ಕಾಲು, ಕೈ ಹಿಡಿದು ಕೆಲಸಕ್ಕೆ ಕರೆದುಕೊಂಡು ಬಂದಿದ್ದೇನೆ’ ಎಂದು ಹೇಳಿದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.