ದರ್ಶನ್ ಅಭಿನಯದ ಡೆವಿಲ್ ಚಿತ್ರದ ಹೊಸ ಪೋಸ್ಟರ್ ಅನ್ನು ಅವರ ಪತ್ನಿ ವಿಜಯಲಕ್ಷ್ಮಿ ತಮ್ಮ ಹಾಗೂ ದರ್ಶನ್ ಅವರ ಸಾಮಾಜಿಕ ಮಾಧ್ಯಮ ಖಾತೆಗಳಲ್ಲಿ ಹಂಚಿಕೊಂಡಿದ್ದಾರೆ.

‘ನಿಮ್ಮ ಚಾಲೆಂಜಿಂಗ್ ಸ್ಟಾರ್ ದರ್ಶನ್ ಹೃದಯದಲ್ಲಿ ನೀವೆಲ್ಲರೂ ಇದ್ದೀರಿ. ಅವರು ಮರಳಿ ಬಂದು ನೇರವಾಗಿ ನಿಮ್ಮನ್ನು ಸಂಪರ್ಕಿಸುವ ತನಕ ನಾನು ಅವರ ಸಾಮಾಜಿಕ ಮಾಧ್ಯಮವನ್ನು ನಾನು ನಿರ್ವಹಿಸುತ್ತೇನೆ. ಅವರ ಪರವಾಗಿ ಅಪ್ಡೇಟ್ ನೀಡುತ್ತೇನೆ ಮತ್ತು ಸಿನಿಮಾ ಪ್ರಚಾರ ಮಾಡುತ್ತೇನೆ’ ಎಂದು ವಿಜಯಲಕ್ಷ್ಮಿ ದರ್ಶನ್ ಅವರು ಪೋಸ್ಟ್ ಮಾಡಿದ್ದಾರೆ.

‘ಮಿಲನ’ ಪ್ರಕಾಶ್ ನಿರ್ದೇಶಿಸಿ, ನಿರ್ಮಿಸಿರುವ ಚಿತ್ರ ಪೋಸ್ಟ್ ಪ್ರೊಡಕ್ಷನ್ ಹಂತದಲ್ಲಿದೆ. ಪ್ರಚಾರದ ಮೊದಲ ಹಂತವಾಗಿ ‘ಇದ್ರೆ ನೆಮ್ಮದಿಯಾಗ್ ಇರ್ಬೇಕ್’ ಹಾಡನ್ನು ಬಿಡುಗಡೆ ಮಾಡಲು ತಂಡ ನಿರ್ಧರಿಸಿತ್ತು. ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪ್ರಮುಖ ಆರೋಪಿ ಆಗಿರುವ ದರ್ಶನ್ ಹಾಗೂ ಇತರರ ಜಾಮೀನನ್ನು ಸುಪ್ರೀಂ ಕೋರ್ಟ್ ಇತ್ತೀಚೆಗೆ ರದ್ದು ಮಾಡಿದ್ದು, ಸದ್ಯ ಅವರು ಜೈಲಿನಲ್ಲಿದ್ದಾರೆ. ಹೀಗಾಗಿ ಹಾಡು ಬಿಡುಗಡೆಯನ್ನು ಚಿತ್ರತಂಡ ಮುಂದಕ್ಕೆ ಹಾಕಿಕೊಂಡಿತ್ತು. ಆದರೆ ಈಗ ವಿಜಯಲಕ್ಷ್ಮಿ ಹೊಸ ಪೋಸ್ಟರ್ ಹಂಚಿಕೊಳ್ಳುವ ಮೂಲಕ ಚಿತ್ರ ಪ್ರಚಾರ ಆರಂಭದ ಮುನ್ಸೂಚನೆ ನೀಡಿದ್ದಾರೆ.
.ವಿಜಯಲಕ್ಷ್ಮಿ ಮೂಲಕ ನಟ ದರ್ಶನ್ ಸಂದೇಶ: ದಿ ಡೆವಿಲ್ ಅಡೆತಡೆ ಇಲ್ಲದೆ ಸಾಗಲಿ....ಪರಪ್ಪನ ಅಗ್ರಹಾರದಲ್ಲಿ ಪವಿತ್ರಾ ಕೈದಿ ನಂ. 7313, ದರ್ಶನ್ 7314.ನಟ ದರ್ಶನ್ ಜಾಮೀನು ರದ್ದು: ಡೆವಿಲ್ ಸಿನಿಮಾದ ಹಾಡು ಬಿಡುಗಡೆ ಮುಂದಕ್ಕೆ.ನಟ ದರ್ಶನ್ ಜಾಮೀನು ರದ್ದು; ಕಾನೂನಿನ ಮುಂದೆ ಎಲ್ಲರೂ ಸಮಾನರು ಎಂದ ರಮ್ಯಾ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.