ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶೂಟಿಂಗ್‌ ಅಖಾಡಕ್ಕೆ ‘ವಾಮನ’: ನಟ ಧ್ವನೀರ್ ಹೊಸ ಸಿನಿಮಾ

Last Updated 22 ಮಾರ್ಚ್ 2022, 7:45 IST
ಅಕ್ಷರ ಗಾತ್ರ

‘ಬಜಾರ್‌’ ಸಿನಿಮಾ ಮೂಲಕ ಬಣ್ಣದ ಲೋಕದಲ್ಲಿ ಅದೃಷ್ಟ ಪರೀಕ್ಷೆಗಿಳಿದಿದ್ದ ನಟ ಧ್ವನೀರ್,‌ ಮೊದಲ ಸಿನಿಮಾದಲ್ಲಿಯೇ ಯಶಸ್ಸು ಕಂಡಿದ್ದರು. ಇದೀಗ ನಟಿ ಶ್ರೀಲೀಲಾ ಜೋಡಿಯಾಗಿ ನಟಿಸಿದ್ದ ‘ಬೈ ಟು ಲವ್’ ಸಿನಿಮಾ ಗುಂಗಿನಲ್ಲೇ ಹೊಸ ಸಿನಿಮಾದ ಚಿತ್ರೀಕರಣಕ್ಕೆ ಧನ್ವೀರ್‌ ಧುಮುಕಿದ್ದಾರೆ.

ಇತ್ತೀಚೆಗಷ್ಟೇ ಕತ್ತಿ ಮಾರಮ್ಮ ದೇಗುಲದಲ್ಲಿ ‘ವಾಮನ’ ಚಿತ್ರದ ಮುಹೂರ್ತ ನಡೆದಿದೆ. ಸಂಕ್ರಾಂತಿಯಂದು ಚಿತ್ರದ ಫಸ್ಟ್‌ಲುಕ್‌ ಹಾಗೂ ಶೀರ್ಷಿಕೆ ಬಿಡುಗಡೆಯಾಗಿತ್ತು. ಕನ್ನಡ ಮತ್ತು ತೆಲುಗು ಚಿತ್ರಗಳಿಗೆ ಸಂಭಾಷಣಾಗಾರನಾಗಿ ಕಾರ್ಯನಿರ್ವಹಿಸಿದ್ದ ಶಂಕರ್ ರಾಮನ್ ಈಗ ನಿರ್ದೇಶಕರಾಗಿ ಮೊದಲ ಹೆಜ್ಜೆ ಇಡುತ್ತಿದ್ದಾರೆ.

ಮಾಫಿಯಾ ಲೋಕದ ಕಥೆಯ ಜೊತೆ ಆ್ಯಕ್ಷನ್‌ ಎಂಟರ್‌ಟೈನರ್‌ ಸಿನಿಮಾ ಇದಾಗಿದೆ. ಮುಹೂರ್ತದ ದಿನದಿಂದಲೇ ಚಿತ್ರೀಕರಣ ಆರಂಭವಾಗಿದ್ದು, ಬೆಂಗಳೂರಿನಲ್ಲಿಯೇ‌ ಮೊದಲ ಹಂತದ ಚಿತ್ರೀಕರಣ ನಡೆಯಲಿದೆ. ಈಕ್ವಿನಾಕ್ಸ್ ಗ್ಲೋಬಲ್‌ ಎಂಟರ್‌ಟೈನ್‌ಮೆಂಟ್‌ ಪ್ರೊಡಕ್ಷನ್‌ನಡಿ ಚೇತನ್ ಕುಮಾರ್ ಈ ಸಿನಿಮಾಗೆ ಬಂಡವಾಳ ಹೂಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT