ಶುಕ್ರವಾರ, 10 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನಟ ದುನಿಯಾ ವಿಜಯ್ ತಂದೆ ರುದ್ರಪ್ಪ ನಿಧನ

Last Updated 18 ನವೆಂಬರ್ 2021, 10:38 IST
ಅಕ್ಷರ ಗಾತ್ರ

ಬೆಂಗಳೂರು: ನಟ, ನಿರ್ದೇಶಕ ದುನಿಯಾ ವಿಜಯ್ ತಂದೆ ರುದ್ರಪ್ಪ ಅವರು ಇಂದು (ನ.19) ನಿಧನರಾಗಿದ್ದಾರೆ. ಅವರಿಗೆ 81 ವರ್ಷ ವಯಸ್ಸಾಗಿತ್ತು.

ಅನಾರೋಗ್ಯದಿಂದ ಬಳಲುತ್ತಿದ್ದ ರುದ್ರಪ್ಪ ಅವರನ್ನು ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ.

ತಮ್ಮ ತಂದೆ ನಿಧನರಾಗಿದ್ದರ ಕುರಿತು ಫೇಸ್‌ಬುಕ್‌ಲ್ಲಿ ದುನಿಯಾ ವಿಜಯ್ ಬರೆದುಕೊಂಡಿದ್ದು, ‘ಮಿಸ್ ಯು ಅಪ್ಪಾ’ ಎಂದು ಪೋಸ್ಟ್ ಹಾಕಿದ್ದಾರೆ.

ಕಳೆದ ಜುಲೈನಲ್ಲಿ ವಿಜಯ್ ಅವರ ತಾಯಿ ನಾರಾಯಣಮ್ಮ ಕೂಡ ನಿಧನರಾಗಿದ್ದರು. ಅಭಿಮಾನಿಗಳು ಸಂತಾಪ ಸೂಚಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT