ಬುಧವಾರ, ಜುಲೈ 28, 2021
21 °C

ಹುಟ್ಟುಹಬ್ಬ ಆಚರಿಸಿಕೊಳ್ಳದಿರಲು ನಿರ್ಧರಿಸಿದ ನಟ ಪ್ರಜ್ವಲ್ ದೇವರಾಜ್

ಪ್ರಜಾವಾಣಿ ವೆಬ್ ಡೆಸ್ಕ್‌ Updated:

ಅಕ್ಷರ ಗಾತ್ರ : | |

Prajwal Devaraj Instagram

ಬೆಂಗಳೂರು: ಚಂದನವನದ ನಟ ಪ್ರಜ್ವಲ್ ದೇವರಾಜ್ ಜುಲೈ 5ರಂದು 34ನೇ ವರ್ಷಕ್ಕೆ ಕಾಲಿಡುತ್ತಿದ್ದಾರೆ. ಆದರೆ ಈ ಬಾರಿ ಹುಟ್ಟುಹಬ್ಬದ ಸಂದರ್ಭದಲ್ಲಿ ಯಾವುದೇ ಕಾರ್ಯಕ್ರಮ ನಡೆಸದಿರಲು ಅವರು ನಿರ್ಧರಿಸಿದ್ದಾರೆ.

ಈಗಾಗಲೇ ಕೋವಿಡ್ ಸಂಕಷ್ಟ ಮತ್ತು ಲಾಕ್‌ಡೌನ್ ಸ್ಥಿತಿಯಿಂದಾಗಿ ಜನರು ಸಂಕಷ್ಟಕ್ಕೆ ಈಡಾಗಿದ್ದಾರೆ. ಅದರಲ್ಲೂ ನಟ ಗಣೇಶ್, ದರ್ಶನ್ ಕೂಡ ಹುಟ್ಟುಹಬ್ಬ ಆಚರಿಸಿಕೊಂಡಿಲ್ಲ. ಹೀಗಾಗಿ ಪ್ರಜ್ವಲ್ ಕೂಡ ಅದೇ ಹಾದಿಯಲ್ಲಿ ಸಾಗಿದ್ದಾರೆ.

ಹುಟ್ಟುಹಬ್ಬ ಆಚರಿಸಿಕೊಳ್ಳದೇ ಇರುವ ಬಗ್ಗೆ ಪ್ರಜ್ವಲ್ ದೇವರಾಜ್ ಸಾಮಾಜಿಕ ತಾಣಗಳಲ್ಲಿ ಪೋಸ್ಟ್ ಮಾಡಿದ್ದಾರೆ. ಕಳೆದ ವರ್ಷ ನನ್ನ ಹುಟ್ಟುಹಬ್ಬದ ದಿನದಂದು ಅಭಿಮಾನಿಗಳು ನಾನು ದತ್ತು ತೆಗೆದುಕೊಂಡ ಶಾಲೆಯ ಮಕ್ಕಳಿಗೆ ಪುಸ್ತಕ ಹಂಚಿದ್ದರು. ಆದರೆ ಈ ಬಾರಿ ಕೋವಿಡ್ ಸಂಕಷ್ಟವಿದ್ದು, ಹುಟ್ಟುಹಬ್ಬ ಆಚರಿಸದಿರಲು ನಿರ್ಧರಿಸಿದ್ದೇನೆ, ಹೀಗಾಗಿ ಹೂವಿನ ಹಾರ, ಕೇಕ್ ಬದಲಿಗೆ ಆ ಮೊತ್ತವನ್ನು ಅಗತ್ಯವಿರುವವರ ನೆರವಿಗೆ ಬಳಸಿ ಎಂದು ಕೇಳಿಕೊಂಡಿದ್ದಾರೆ.

ಮತ್ತೊಂದೆಡೆ ಪ್ರಜ್ವಲ್ ಹುಟ್ಟುಹಬ್ಬದ ಸಂದರ್ಭದಲ್ಲಿ ವೀರಂ ಚಿತ್ರದ ಟೀಸರ್ ಕೂಡ ಬಿಡುಗಡೆಯಾಗಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು