ಶುಕ್ರವಾರ, ಮೇ 27, 2022
23 °C

ಕನ್ನಡ ಧ್ವಜ ಸುಟ್ಟ ಹೇಡಿಗಳಿಗೆ ಶಿಕ್ಷೆಯಾಗಲೇಬೇಕು: ಶಿವರಾಜ್‌ಕುಮಾರ್‌, ದರ್ಶನ್‌

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಮಹಾರಾಷ್ಟ್ರದ ಕೊಲ್ಹಾಪುರದಲ್ಲಿ ಶಿವಸೇನಾ ಕಾರ್ಯಕರ್ತರು ಕನ್ನಡ ಬಾವುಟವನ್ನು ಸುಟ್ಟು ಹಾಕಿರುವ ಘಟನೆಯನ್ನು ನಟರಾದ ಶಿವರಾಜ್‌ಕುಮಾರ್‌ ಹಾಗೂ ದರ್ಶನ್‌ ಅವರು ಖಂಡಿಸಿದ್ದು, ‘ನಮ್ಮ ಕರುನಾಡ ಧ್ವಜ ಸುಟ್ಟ ಹೇಡಿಗಳಿಗೆ ತಕ್ಕ ಶಿಕ್ಷೆಯಾಗಲೇಬೇಕು’ ಎಂದು ಆಗ್ರಹಿಸಿದ್ದಾರೆ.

‘ನಮ್ಮ ನಾಡ ಧ್ವಜ ಸುಟ್ಟವರಿಗೆ ತಕ್ಕ ಶಿಕ್ಷೆ ಆಗಲಿ. ನಿಜವಾದ ಕನ್ನಡಪರ ಹೋರಾಟಗಾರರನ್ನು ಬಿಡುಗಡೆಗೊಳಿಸಿ. ಜೈ ಕನ್ನಡ. ಜೈ ಕರ್ನಾಟಕ’ ಎಂದು ಶಿವರಾಜ್‌ಕುಮಾರ್‌ ಟ್ವೀಟ್‌ನಲ್ಲಿ ಹೇಳಿದ್ದಾರೆ. ಜೊತೆಗೆ ವರನಟ ಡಾ.ರಾಜ್‌ಕುಮಾರ್‌ ಅವರು ಕನ್ನಡ ಪರ ಹೋರಾಟ ಮಾಡಿದ ಸಂದರ್ಭದ ಫೋಟೊವೊಂದನ್ನು ಶಿವರಾಜ್‌ಕುಮಾರ್‌ ಅಪ್‌ಲೋಡ್‌ ಮಾಡಿದ್ದಾರೆ.

‘ಕನ್ನಡ ಹೋರಾಟಗಾರರನ್ನ ಬಿಡುಗಡೆಗೊಳಿಸಿ’ ಎಂಬ ಹ್ಯಾಷ್‌ಟ್ಯಾಗ್‌ ಅಭಿಯಾನವನ್ನೂ ಶಿವರಾಜ್‌ಕುಮಾರ್‌ ಆರಂಭಿಸಿದ್ದಾರೆ.

‘ನಿಜವಾಗಿ ಕನ್ನಡ ಪರ ಹೋರಾಟ ಮಾಡುವವರನ್ನು ಬಿಡುಗಡೆಗೊಳಿಸಿ. ಕನ್ನಡ ತಾಯಿ ತಾಯ್ನಾಡು ವಿಷಯಕ್ಕೆ ಈ ರೀತಿ ಅವಮಾನ ಮಾಡಿರುವವರಿಗೆ ತಕ್ಕ ಪಾಠ ಕಲಿಸಲೇಬೇಕು. ದಯಮಾಡಿ ತಕ್ಕ ಕ್ರಮ ಕೈಗೊಳ್ಳಬೇಕಾಗಿ ವಿನಂತಿ’ ಎಂದು ಟ್ವೀಟ್‌ ಮಾಡಿರುವ ದರ್ಶನ್‌ ಅವರು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಮುಖ್ಯಮಂತ್ರಿ ಟ್ವೀಟ್‌ ಖಾತೆಯನ್ನು ತಮ್ಮ  ಟ್ವೀಟ್‌ಗೆ ಟ್ಯಾಗ್‌ ಮಾಡಿದ್ದಾರೆ.

ಈ ಟ್ವೀಟ್‌ಗೆ ಸಾವಿರಾರು ಜನರು ಪ್ರತಿಕ್ರಿಯೆ ನೀಡಿದ್ದು, ‘ಕನ್ನಡಿಗರ ಹೋರಾಟಕ್ಕೆ ಇದೀಗ ಆನೆಬಲ ಬಂದಂತಾಗಿದೆ’ ಎಂದಿದ್ದಾರೆ.

ಇದನ್ನೂ ಓದಿ... ಬೆಳಗಾವಿ: ಕೊಲ್ಲಾಪುರದಲ್ಲಿ ಕನ್ನಡ ಬಾವುಟ ಸುಟ್ಟ‌ ಶಿವಸೇನಾ ಕಾರ್ಯಕರ್ತರು

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು