ಹುಟ್ಟುಹಬ್ಬದ ಸಂಭ್ರಮದಲ್ಲಿ ಪರಮಾತ್ಮನ ಬೆಡಗಿ ದೀಪಾ ಸನ್ನಿಧಿ

ಬೆಂಗಳೂರು: ಪುನೀತ್ ರಾಜ್‌ಕುಮಾರ್ ಅಭಿನಯದ ಪರಮಾತ್ಮ ಮತ್ತು ದರ್ಶನ್ ಅಭಿನಯದ ಸಾರಥಿ ಚಿತ್ರದ ಮೂಲಕ ಕನ್ನಡ ಚಿತ್ರರಂಗದಲ್ಲಿ ಹೆಸರು ಗಳಿಸಿದ್ದ ನಟಿ ದೀಪಾ ಸನ್ನಿಧಿ ಜೂನ್ 16ರಂದು ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿದ್ದಾರೆ.
ಚಿಕ್ಕಮಗಳೂರು ಮೂಲದವರಾದ ದೀಪಾ ಸನ್ನಿಧಿ, ಕನ್ನಡ ಮಾತ್ರವಲ್ಲದೆ ತೆಲುಗು ಚಿತ್ರಗಳಲ್ಲೂ ನಟಿಸಿದ್ದಾರೆ. ನಟನೆ ಜತೆಗೆ ಮಾಡೆಲಿಂಗ್‌ನಲ್ಲೂ ದೀಪಾ ಮಿಂಚಿದ್ದಾರೆ.
ದರ್ಶನ್ ಜತೆಗೆ 2011ರಲ್ಲಿ ಸಾರಥಿ ಸಿನಿಮಾದಲ್ಲಿ ನಟಿಸುವ ಮೂಲಕ ದೀಪಾ ಕನ್ನಡ ಚಿತ್ರರಂಗ ಪ್ರವೇಶಿಸಿದ್ದರು. ಬಳಿಕ, ಪರಮಾತ್ಮ ಚಿತ್ರದಲ್ಲಿನ ನಟನೆಗೆ ಎಲ್ಲರಿಂದ ಪ್ರಶಂಸೆ ಗಿಟ್ಟಿಸಿಕೊಂಡಿದ್ದರು.

ಬಳಿಕ ಜಾನು, ಸಕ್ಕರೆ, ಚೌಕ ಹಾಗೂ ಚಕ್ರವರ್ತಿ ಸಿನಿಮಾದಲ್ಲಿ ಕೂಡ ನಟಿಸಿದ್ದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.