ಲಂಡನ್‌ನಲ್ಲಿ ಚಿತ್ರೀಕರಣ ಮುಗಿಸಿದ ರಾಗಿಣಿ ದ್ವಿವೇದಿ

ತುಪ್ಪದ ಬೆಡಗಿ ನಟಿ ರಾಗಿಣಿ ದ್ವಿವೇದಿ 'ವಾಕ್ರೋ ಹೌಸ್' ಎಂಬ ಹಿಂದಿ ಸಿನಿಮಾವೊಂದರಲ್ಲಿ ಅಭಿನಯಿಸುತ್ತಿದ್ದಾರೆ. ಈಗಾಗಲೇ ಮೊದಲ ಹಂತದ ಚಿತ್ರೀಕರಣ ಲಂಡನ್‌ನಲ್ಲಿ ಪೂರ್ಣಗೊಂಡಿದೆ.
ಕನ್ನಡ ಚಿತ್ರರಂಗದಲ್ಲಿ ಉತ್ತಮ ಪ್ರಯಾಣವಾಗಿದೆ. ಈಗ ಹಿಂದಿ ಸಿನಿಮಾವೊಂದರಲ್ಲಿ ನಟಿಸುತ್ತಿದ್ದು, ಮೊದಲ ಹಂತದ ಶೂಟಿಂಗ್ ಮುಗಿದಿದೆ. ಇದೊಂದು ಹಾರರ್, ಥ್ರಿಲ್ಲರ್ ಚಿತ್ರವಾಗಿದ್ದು, ಯಶಸ್ವಿ ಸಿನಿಮಾಗಳ ನಿರ್ದೇಶಕ ಆಯುರ್ ಶರ್ಮಾ ಆ್ಯಕ್ಷನ್ ಕಟ್ ಹೇಳುತ್ತಿದ್ದಾರೆ. ಸಂಪೂರ್ಣ ಶೂಟಿಂಗ್ ಮುಗಿದ ಮೇಲೆ ತಂಡದೊಂದಿಗೆ ಮತ್ತೆ ಬರುತ್ತೇನೆ ಎಂದು ರಾಗಿಣಿ ಮಾಧ್ಯಮಗಳಿಗೆ ತಿಳಿಸಿದ್ದಾರೆ.
ತಾವು ಇದರಲ್ಲಿ ಲಂಡನ್ ಮೂಲದ ಪುಸ್ತಕ ಬರಹಗಾರ್ತಿ ಪಾತ್ರ ಮಾಡುತ್ತಿದ್ದು, ತಮ್ಮ ಜೊತೆ ಈ ಚಿತ್ರದಲ್ಲಿ ಪರಂವ್ಹಾ ಸೇರಿದಂತೆ ಸಾಕಷ್ಟು ಜನ ಒಳ್ಳೆ ಕಲಾವಿದರಿದ್ದಾರೆ. ಮೊದಲ ಹಿಂದಿ ಸಿನಿಮಾ ಹಾರರ್ ಆಗಿದ್ದು, ಒಳ್ಳೆ ಕಥೆ, ಪಾತ್ರ ಇದಿದ್ದರಿಂದ ಖುಷಿಯಾಗಿದ್ದೇನೆ ಎಂದು ಅವರು ಹೇಳಿದ್ದಾರೆ.
ಈ ಹಿಂದಿ ಸಿನಿಮಾ ಜತೆಗೆ ಮಲಯಾಳದಲ್ಲಿ ಒಂದು, ತಮಿಳಿನಲ್ಲಿ ಮೂರು, ಕನ್ನಡದಲ್ಲಿ 2 ಸಿನಿಮಾ ಪೂರೈಸಿರುವುದಾಗಿ ರಾಗಿಣಿ ಹೇಳಿದ್ದಾರೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.