ಬೆಂಗಳೂರು: ಶುಕ್ರವಾರ ಹೃದಯಾಘಾತಕ್ಕೆ ಒಳಗಾಗಿ ನಿಧನರಾದ ಕನ್ನಡದ ಜನಪ್ರಿಯ ನಟ ಪುನೀತ್ ರಾಜ್ಕುಮಾರ್ ಅವರಿಗಾಗಿ ಚಂದನವನ ಕಂಬನಿ ಮಿಡಿದಿದೆ.

ಪುನೀತ್ ಅವರ ಜತೆ ತೆರೆ ಹಂಚಿಕೊಂಡಿದ್ದ ನಟ-ನಟಿಯರು ದೊಡ್ಮನೆ ಹುಡುಗನ ಗುಣಗಾನ ಮಾಡುವ ಮೂಲಕ ನಟನ ಜತೆಗಿನ ನೆನಪನ್ನು ಹಂಚಿಕೊಂಡಿದ್ದಾರೆ.

ನಟಿ ರಮ್ಯಾ ಅವರು, ಭಾವನೆಗಳು ಕೆಲವು ವೈಯಕ್ತಿಕ. ಅವುಗಳನ್ನು ಪದಗಳಲ್ಲಿ ಹೇಳಲಾಗದು. RIP ಎಂದು ಹೇಳಿ ಮುಗಿಸಲಾಗದು. ದೇಹ ಮನಸ್ಸಿಗೂ ಮೀರಿದ್ದು ಭಾವನೆ. ಕೆಲವು ಬಾಂಧವ್ಯ ವರ್ಣನೆಗೂ ಮೀರಿದ್ದು. ಬೇರೇನನ್ನು ಹೇಳಲಾಗದ ಸಂದರ್ಭ ಇದು. ಸಿನಿಮಾ ರಂಗದಲ್ಲಿ ಆತ ನನಗೆ ಅತ್ಯಂತ ಆಪ್ತ ಸ್ನೇಹಿತ. ಅಪ್ಪು ನೀವು ಎಂದೆಂದಿಗೂ ಮಾಸದ ನೆನಪು. ಸದಾ ನನ್ನ ನೆನಪಿನಲ್ಲಿ ಎಂದೆಂದೂ ಇರುವಿರಿ ಅಪ್ಪು ಎಂದು ತಮ್ಮ ಇನ್ಸ್ಟಾಗ್ರಾಂ ಸ್ಟೋರೀಸ್ನಲ್ಲಿ ಪೋಸ್ಟ್ ಮಾಡಿದ್ದಾರೆ.

ರಮ್ಯಾ ಮತ್ತು ಪುನೀತ್ ಅವರ ಜೋಡಿಯನ್ನು ಚಿತ್ರರಂಗದಲ್ಲಿ ಜನರು ಮೆಚ್ಚಿಕೊಂಡಿದ್ದರು. ಅಲ್ಲದೆ, ರಮ್ಯಾ ಚಿತ್ರರಂಗದಿಂದ ದೂರ ಉಳಿದರೂ, ಅಪ್ಪು ಜತೆ ಸ್ನೇಹ ಹೊಂದಿದ್ದರು.

LIVE- Puneeth Rajkumar No More| ಕಂಠೀರವ ಸ್ಟೇಡಿಯಂನಲ್ಲಿ ಪುನೀತ್ ರಾಜ್ಕುಮಾರ್ ಪಾರ್ಥಿವ ಶರೀರದ ಅಂತಿಮ ದರ್ಶನ Live

ಗೆಳೆಯನ ಅಗಲಿಕೆಯ ನೋವು ಕುರಿತು ರಮ್ಯಾ ತಮ್ಮ ಭಾವನೆಗಳನ್ನು ಸಾಮಾಜಿಕ ತಾಣದ ಮೂಲಕ ಹಂಚಿಕೊಂಡಿದ್ದಾರೆ.

Photos: ಕನ್ನಡ ಚಿತ್ರರಂಗದ 'ಯುವರತ್ನ' ಪುನೀತ್ ರಾಜ್ಕುಮಾರ್ ಅಪರೂಪದ ಚಿತ್ರಗಳು

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.