ಕೆಲ ಪಾಪರಾಜಿಗಳು ಕನ್ನಡದ ನಟಿಯರ ವಿಡಿಯೊಗಳನ್ನು ಅಸಭ್ಯವಾಗಿ ಸೆರೆ ಹಿಡಿದು ಸಾಮಾಜಿಕ ಜಾಲತಾಣದಲ್ಲಿ ಹರಿಬಿಡುತ್ತಿರುವುದನ್ನು ನಟಿ ಸಪ್ತಮಿ ಗೌಡ ಅವರು ಖಂಡಿಸಿದ್ದರು. ಆ ಬೆನ್ನಲ್ಲೆ ಚಂದನವನದ ನಟಿಯರ ಸಾಮಾಜಿಕ ಮಾಧ್ಯಮದಲ್ಲಿ ಅಸಭ್ಯ ವಿಡಿಯೊ ಹಂಚಿಕೊಳ್ಳುವವರ ವಿರುದ್ಧ ಸಮರ ಸಾರುತ್ತಿದ್ದಾರೆ.

ನಟಿ ಸಪ್ತಮಿ ಗೌಡ ಹಂಚಿಕೊಂಡ ಪೋಸ್ಟ್ ಅನ್ನು ನಟಿಯರಾದ ಬೃಂದಾ ಆಚಾರ್ಯ, ಆಶಿಕಾ ರಂಗನಾಥ್, ರಿತನ್ಯಾ ವಿಜಯ್, ರಮ್ಯಾ, ರಕ್ಷಿತಾ ಪ್ರೇಮ್, ಸಂಜನಾ ಆನಂದ್, ಚೈತ್ರಾ ಜೈ ಆಚಾರ್, ವಾಸುಕಿ ವೈಭವ್, ನಟಿ ಅನುಪಮಾ ಗೌಡ, ನಟ ಯುವರಾಜ್ ಕುಮಾರ್ ಅವರು ಇನ್ಸ್ಟಾಗ್ರಾಂ ಸ್ಟೋರಿಯಲ್ಲಿ ಹಂಚಿಕೊಂಡು ಅಂಥವರ ವಿರುದ್ಧ ಕಿಡಿ ಕಾರುತ್ತಿದ್ದಾರೆ.
.ಅಸಭ್ಯವಾಗಿ ವಿಡಿಯೊ ಚಿತ್ರೀಕರಿಸಿದವರ ವಿರುದ್ಧ ನಟಿ ಸಪ್ತಮಿ ಗೌಡ ಗರಂ.ಸೈಕಲ್ ಓಡಿಸಿದ್ರು, ಬಾವಿಗೆ ಧುಮುಕಿದ್ರು; ತೆರೆಹಿಂದೆ ನಟಿ ಸಪ್ತಮಿ ಗೌಡ ತುಂಟಾಟ.
ನಟಿಯರು ಹಂಚಿಕೊಂಡ ಸ್ಟೋರಿಯಲ್ಲಿ ಏನಿದೆ?

‘ಚಿತ್ರರಂಗದಲ್ಲಿರುವ ಮಹಿಳೆಯರಾಗಿ, ನಿರಂತರವಾಗಿ ನಡೆಯುತ್ತಿರುವ ಒಂದು ಗಂಭೀರ ಸಮಸ್ಯೆಯನ್ನು ಎದುರಿಸಲು ಒಟ್ಟಾಗಿ ನಿಂತಿದ್ದೇವೆ. ಸಾರ್ವಜನಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸುವ ಮಹಿಳಾ ಕಲಾವಿದರ ವಿಡಿಯೊಗಳು ಮತ್ತು ಫೋಟೊಗಳನ್ನು ಅಸಭ್ಯವಾಗಿ ಚಿತ್ರೀಕರಿಸಿ, ನಮ್ಮ ಕಲೆಗಿಂತ ನಮ್ಮ ದೇಹದ ಮೇಲೆ ಅನಾವಶ್ಯಕವಾಗಿ ಜೂಮ್ ಮಾಡಿ ಪ್ರಸಾರ ಮಾಡುವ ಘಟನೆಗಳು ಪುನಃ ಪುನಃ ನಡೆಯುತ್ತಿವೆ. ಇಂತಹ ವರ್ತನೆ, ಕೆಲವರಿಂದ ನಡೆಯುತ್ತಿರುವುದಾದರೂ, ಇದು ಅವಮಾನಕಾರಿ ಮತ್ತು ಸ್ವೀಕಾರಾರ್ಹವಲ್ಲ’ ಎಂದರು.

‘ನಾವು ಇಲ್ಲಿ ನಮ್ಮ ಕಲೆಗಾಗಿ ಬಂದಿದ್ದೇವೆ. ನಾವು ಇಲ್ಲಿ ನಮ್ಮ ಸಿನಿಮಾಕ್ಕಾಗಿ ಬಂದಿದ್ದೇವೆ. ಉದ್ದೇಶಪೂರ್ವಕವಾಗಿ ಜೂಮ್ ಮಾಡುವುದು ಮತ್ತು ಅಸಭ್ಯ ಚಿತ್ರೀಕರಿಸುವುದು ನಮ್ಮ ಗೌರವಕ್ಕೆ ಧಕ್ಕೆಯಾಗುತ್ತದೆ. ಇದನ್ನು ಸಾಮಾನ್ಯವೆಂದು ಸ್ವೀಕರಿಸುವುದಿಲ್ಲ, ಸಹಿಸುವುದಿಲ್ಲ. ಕಾರ್ಯಕ್ರಮಗಳನ್ನು ವರದಿ ಮಾಡುವವರು ವೃತ್ತಿಪರತೆ, ಮೂಲಭೂತ ಗೌರವ ಮತ್ತು ಶಿಸ್ತನ್ನು ಕಾಪಾಡಬೇಕು ಎಂದು ನಾವು ನಿರೀಕ್ಷಿಸುತ್ತೇವೆ. ಈ ಗಡಿರೇಖೆಯನ್ನು ಸ್ಪಷ್ಟವಾಗಿ ಎಳೆದು, ನಾವು ಒಟ್ಟಾಗಿ ನಿಂತಿದ್ದೇವೆ. ಇಂತಹ ಅನುಭವವನ್ನು ಎದುರಿಸಿದ ಪ್ರತಿಯೊಬ್ಬ ಮಹಿಳೆಯೊಂದಿಗೂ ನಾವು ಐಕ್ಯತೆಯಲ್ಲಿ ನಿಂತಿದ್ದೇವೆ. ಗೌರವವನ್ನು ಬೇಡುವ ನಮ್ಮ ಧ್ವನಿ ಮುಂದುವರೆಯುತ್ತದೆ’ ಎಂದಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.