ನಾಡಿನಾದ್ಯಂತ ಬೆಳಕಿನ ಹಬ್ಬ ದೀಪಾವಳಿಯನ್ನ ವಿಜೃಂಭಣೆಯಿಂದ ಆಚರಿಸಲಾಗಿದೆ. ಹಾಗೇ ಕನ್ನಡದ ನಟ– ನಟಿಯರ ಕುಟುಂಬವು ದೀಪಾವಳಿ ಹಬ್ಬವನ್ನು ಅದ್ಧೂರಿಯಾಗಿ ಆಚರಿಸಿದ್ದಾರೆ. ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಅವರು ದೀಪಾವಳಿಯನ್ನು ಆಚರಿಸಿದ್ದಾರೆ.
ಚಿತ್ರ: ಇನ್‌ಸ್ಟಾಗ್ರಾಮ್
ADVERTISEMENT
ಜೆಡಿಎಸ್ ಯು ಘಟಕದ ಅಧ್ಯಕ್ಷ, ನಟ ನಿಖಿಲ್ ಕುಮಾರ್‌ಸ್ವಾಮಿ ಕುಟುಂಬ ಕೂಡ ದೀಪಾವಳಿ ಹಬ್ಬವನ್ನು ಆಚರಿಸಿದ್ದಾರೆ. ತಂದೆ ಹೆಚ್.ಡಿ ಕುಮಾರಸ್ವಾಮಿ, ತಾಯಿ ಅನಿತಾ, ಪತ್ನಿ ರೇವತಿ, ಪುತ್ರ ಅವ್ಯಾನ್ ದೇವ್ ಜೊತೆಗೆ ನಿಖಿಲ್ ಕುಮಾರಸ್ವಾಮಿ ಫೋಟೊವನ್ನು ಕ್ಲಿಕ್ಕಿಸಿಕೊಂಡಿದ್ದಾರೆ.
ಚಿತ್ರ: ಇನ್‌ಸ್ಟಾಗ್ರಾಮ್
ರಿಯಲ್ ಸ್ಟಾರ್ ಉಪೇಂದ್ರ ಹಾಗೂ ಪ್ರಿಯಾಂಕಾ ಉಪೇಂದ್ರ ಮನೆಯಲ್ಲಿಯೂ ಕೂಡ ದೀಪಾವಳಿ ಹಬ್ಬವನ್ನು ಅದ್ಧೂರಿಯಾಗಿ ಆಚರಿಸಿದ್ದಾರೆ.
ಚಿತ್ರ: ಇನ್‌ಸ್ಟಾಗ್ರಾಮ್
ಪ್ರಿಯಾಂಕಾ ಉಪೇಂದ್ರ ಅವರು ತಮ್ಮ ನಿವಾಸಕ್ಕೆ ಲೈಟ್‌ಗಳಿಂದ ಅಲಂಕರಿಸಿದ್ದಾರೆ. ಈ ಚಿತ್ರವನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡಿದ್ದಾರೆ.
ಚಿತ್ರ: ಇನ್‌ಸ್ಟಾಗ್ರಾಮ್
ನಟಿ ಅದಿತಿ ಪ್ರಭುದೇವ ಅವರು ತಮ್ಮ ಮುದ್ದಾದ ಮಗಳ ಜೊತೆಗೆ ದೀಪಾವಳಿ ಹಬ್ಬವನ್ನು ಆಚರಿಸಿದ್ದಾರೆ. ಅದಿತಿ ಪ್ರಭುದೇವ ಜೊತೆಗೆ ಮಗಳು ನೇಸರ ಫೋಟೊದಲ್ಲಿ ಕಾಣಿಸಿಕೊಂಡಿದ್ದಾಳೆ.
ಚಿತ್ರ: ಇನ್‌ಸ್ಟಾಗ್ರಾಮ್
ನಟಿ ರಾಧಿಕಾ ಕುಮಾರಸ್ವಾಮಿ ಅವರು ಕೂಡ ಪ್ರತಿ ವರ್ಷದಂತೆ ಈ ಬಾರಿಯೂ ದೀಪಾವಳಿ ಆಚರಿಸಿದ್ದಾರೆ. ಸುಂದರವಾದ ಫೋಟೊಗಳನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡಿದ್ದಾರೆ.