ಸಂಚಾರಿ ವಿಜಯ್ ನೆನಪಿನಲ್ಲಿ ಅವರ ನಟನೆಯ ‘ಪುಕ್ಸಟ್ಟೆ ಲೈಫು ಪುರುಸೊತ್ತೇ ಇಲ್ಲ’ ಚಿತ್ರದ ಟ್ರೇಲರ್ ಬಿಡುಗಡೆಯಾಗಿದೆ.

ವಿಜಯ್ ಅವರ ನಿಧನದ ನಂತರ ಅವರ ಚಿತ್ರಗಳು ಸಾಲಾಗಿ ಬಿಡುಗಡೆ ಕಾಣುತ್ತಿವೆ. ವಿಜಯ್ ಇಲ್ಲದ ಸಂಕಟದ ಸಹಿತ ಭಾವುಕ ಸನ್ನಿವೇಶ ‘ಪುಗ್ಸಟ್ಟೆ ಲೈಫು...’ ಚಿತ್ರ ತಂಡದ್ದು.

‘ಪುಕ್ಸಟ್ಟೆ ಲೈಫು...’ ಅರವಿಂದ್ ಕುಪ್ಳೀಕರ್ ನಿರ್ದೇಶನದ ಚಿತ್ರ. ಸಂಚಾರಿ ವಿಜಯ್ ಬಹುವಾಗಿ ಮೆಚ್ಚಿಕೊಂಡು, ಪ್ರಧಾನ ಪಾತ್ರದಲ್ಲಿ ನಟಿಸಿದ್ದ ಸಿನಿಮಾ.

ಮುಖ್ಯಮಂತ್ರಿ ಚಂದ್ರು, ಬಿ ಜಯಶ್ರೀ, ಚಿತ್ರದ ಪಾತ್ರಧಾರಿಗಳಾದ ರಂಗಾಯಣ ರಘು, ಅಚ್ಯುತ್ ಕುಮಾರ್ ಈ ಸಮಾರಂಭದಲ್ಲಿ ವಿಜಯ್ ನೆನಪುಗಳನ್ನು ಮೆಲುಕು ಹಾಕಿದರು. ವಿಜಯ್ ಹೆಸರಿನಲ್ಲಿ ವೇದಿಕೆಯಲ್ಲಿ ಒಂದು ಖಾಲಿ ಆಸನವನ್ನು ಇರಿಸಲಾಗಿತ್ತು.

‘ಈ ಚಿತ್ರದಲ್ಲಿ ಸಂಚಾರಿ ವಿಜಯ್ಗೆ ಬೀಗ ರಿಪೇರಿ ಮಾಡುವ ಕಾಯಕದ ಶಹಜಹಾನ್ ಎಂಬ ಪಾತ್ರ. ಬೀಗ ರಿಪೇರಿಯಿಂದ ಬರುವ ಸಂಪಾದನೆ ಸಾಲದಾದಾಗ ಶಹಜಹಾನ್ ಈ ವ್ಯವಸ್ಥೆಯ ಚಕ್ರಸುಳಿಗೆ ಸಿಕ್ಕು ನಲುಗುವ ಅಪರೂಪದ ಕಥೆ ಇದು’ ಎಂದಿದೆ ಚಿತ್ರ ತಂಡ. ಸಂಚಾರಿ ವಿಜಯ್ಗೆ ಜೋಡಿಯಾಗಿ ಮಾತಂಗಿ ಪ್ರಸನ್ನ ನಟಿಸಿದ್ದಾರೆ.

ಸುರೇಶ್ ಆರ್ಮುಗಂ ಸಂಕಲನ, ವಾಸು ದೀಕ್ಷಿತ್ ಸಂಗೀತ ನಿರ್ದೇಶನ, ಪೂರ್ಣಚಂದ್ರ ತೇಜಸ್ವಿಯವರ ಹಿನ್ನೆಲೆ ಸಂಗೀತ ಮತ್ತು ಅದ್ವೈತ್ ಗುರುಮೂರ್ತಿ ಛಾಯಾಗ್ರಹಣ ಈ ಚಿತ್ರಕ್ಕಿದೆ. ನಾಗರಾಜ್ ಸೋಮಯಾಜಿ ಚಿತ್ರದ ನಿರ್ಮಾಪಕರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.