ಗುರುವಾರ, 2 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

Sandalwood | ‘ಜಡ್ಜ್‌ಮೆಂಟ್‌’ನಲ್ಲಿ ದಿಗಂತ್‌–ಧನ್ಯ ಹೆಜ್ಜೆ

Published 11 ಆಗಸ್ಟ್ 2023, 1:10 IST
Last Updated 11 ಆಗಸ್ಟ್ 2023, 1:10 IST
ಅಕ್ಷರ ಗಾತ್ರ

‘ದ ಜಡ್ಜ್‌ಮೆಂಟ್‌’ ಚಿತ್ರದ ‘ಪಬ್ ಸಾಂಗ್’ ಇತ್ತೀಚೆಗಷ್ಟೇ ಬೆಂಗಳೂರಿನ ಪಬ್‌ವೊಂದರಲ್ಲಿ ಚಿತ್ರೀಕರಣಗೊಂಡಿತು. ದಿಗಂತ್ ಮತ್ತು ಧನ್ಯ ರಾಮಕುಮಾರ್ ಈ ಹಾಡಿಗೆ ಹೆಜ್ಜೆ ಹಾಕಿದ್ದಾರೆ. ಈ ಹಾಡಿನಲ್ಲಿ ಬಾಲಿವುಡ್‌ನ ಊರ್ವಶಿ ವಿಶೇಷ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.

‘ಕಾನೂನಿನ ಕುರಿತಾಗಿ ಕುತೂಹಲಕಾರಿ ಕಥೆ ಸಿನಿಮಾದಲ್ಲಿದೆ. ಪ್ರಸ್ತುತ ಘಟನೆಗಳನ್ನು ಆಧಾರವಾಗಿ ಇಟ್ಟುಕೊಂಡು ಕಥೆ ಹೆಣೆಯಲಾಗಿದೆ. ಕಥೆಗೆ ತಕ್ಕಂತೆ ಮಾಸ್‌ ಹಾಡನ್ನು ಚಿತ್ರೀಕರಿಸಿದ್ದೇವೆ’ ಎಂದು ನಿರ್ದೇಶಕ ಗುರುರಾಜ ಕುಲಕರ್ಣಿ(ನಾಡಗೌಡ) ತಿಳಿಸಿದರು.

ಗುರುರಾಜ ಕುಲಕರ್ಣಿ ರಚನೆ ಹಾಗೂ ನಿರ್ದೇಶನದ ಈ ಚಿತ್ರಕ್ಕೆ ಪಿಕೆಎಚ್ ದಾಸ್ ಛಾಯಾಗ್ರಹಣ, ಅನೂಪ್ ಸೀಳಿನ್ ಸಂಗೀತ ನಿರ್ದೇಶನ, ಕೆಂಪರಾಜು ಬಿ ಎಸ್ ಸಂಕಲನವಿದೆ.

ಕ್ರೇಜಿ ಸ್ಟಾರ್ ರವಿಚಂದ್ರನ್, ದಿಗಂತ್, ಮೇಘನಾ ಗಾಂವ್ಕರ್, ಧನ್ಯಾ ರಾಮಕುಮಾರ್, ಲಕ್ಷ್ಮೀ ಗೋಪಾಲಸ್ವಾಮಿ, ಟಿ ಎಸ್ ನಾಗಾಭರಣ, ಪ್ರಕಾಶ ಬೆಳವಾಡಿ ರವಿಶಂಕರ ಗೌಡ ಮುಂತಾದವರು ಈ ಚಿತ್ರದಲ್ಲಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT