ಮಂಗಳವಾರ, 7 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಪೆಪೆ’ ಯಲ್ಲಿ ವಿನಯ್ ರಾಜ್‌ಕುಮಾರ್ ಹೀಗಿದ್ದಾರೆ...

Last Updated 1 ಜನವರಿ 2023, 7:23 IST
ಅಕ್ಷರ ಗಾತ್ರ

ಡಾ.ರಾಜ್‌ಕುಮಾರ್‌ ಕುಟುಂಬದ ಹುಡುಗ ವಿನಯ್ ರಾಜ್‌ಕುಮಾರ್ ಅಭಿನಯದ ಬಹು ನಿರೀಕ್ಷಿತ ಚಿತ್ರ ‘ಪೆಪೆ’. ಇದೀಗ ಚಿತ್ರತಂಡ ಹೊಸ ವರ್ಷಕ್ಕೆ ಭಿನ್ನವಾದ ಪೋಸ್ಟರ್ ಬಿಡುಗಡೆ ಮಾಡಿದೆ. ಇದನ್ನು ವಿನಯ್ ರಾಜ್‌ಕುಮಾರ್ ಅವರ ಹೊಸ ಅವತಾರ ಎಂದೂ ಚಿತ್ರತಂಡ ಬಣ್ಣಿಸಿದೆ.

‘ಪೆಪೆ’ಯ ಪೋಸ್ಟ್‌ ಪ್ರೊಡಕ್ಷನ್‌ ಸಾಗಿದೆ. ಶ್ರೀಲೇಶ್ ಎಸ್. ನಾಯರ್ ಚಿತ್ರದ ನಿರ್ದೇಶಕರು. ವಿನಯ್ ರಾಜ್ ಕುಮಾರ್ ಈ ಚಿತ್ರದಲ್ಲಿ ಭಿನ್ನ ಅವತಾರ ತಾಳಿದ್ದಾರೆ. ಗ್ಯಾಂಗ್ ಲೀಡರ್ ಆಗಿ ತೆರೆ ಮೇಲೆ ಬರಲಿದ್ದಾರೆ. ಟೀಸರ್ ಹಾಗೂ ಬಿಡುಗಡೆಯಾಗಿರುವ ಹೊಸ ಪೋಸ್ಟರ್‌ನಲ್ಲಿ ಈ ಸುಳಿವು ಇದೆ.

ಕಾಜಲ್‌ ಕುಂದರ್‌ ಚಿತ್ರದ ನಾಯಕಿ. ಯಶ್ ಶೆಟ್ಟಿ, ಬಾಲ ರಾಜ್ ವಾಡಿ, ಮೆದಿನಿ ಕೆಳಮನಿ, ಅರುಣಾ ಬಾಲರಾಜ್, ನವೀನ್ ಡಿ. ಪಡಿಲ್ ತಾರಾಗಣದಲ್ಲಿದ್ದಾರೆ. ‘ಪೆಪೆ’ ಚಿತ್ರಕ್ಕೆ ಅಭಿಷೇಕ್ ಜಿ. ಕಾಸರಗೋಡು ಅವರ ಛಾಯಾಗ್ರಹಣ, ಪೂರ್ಣಚಂದ್ರ ತೇಜಸ್ವಿ ಸಂಗೀತ ನಿರ್ದೇಶನವಿದೆ. ಡಾ.ರವಿವರ್ಮಾ, ಚೇತನ್ ಡಿಸೋಜಾ, ಡಿಫ್ರೆಂಟ್ ಡ್ಯಾನಿ, ನರಸಿಂಹ ಚಿತ್ರದ ಸಾಹಸ ದೃಶ್ಯಗಳನ್ನು ನಿರ್ದೇಶನ ಮಾಡಿದ್ದಾರೆ. ಬೆಂಗಳೂರು, ಮೈಸೂರು, ಕೊಡಗು, ಸಕಲೇಶಪುರದಲ್ಲಿ ‘ಪೆಪೆ’ ಚಿತ್ರೀಕರಣ ನಡೆದಿದೆ. ಉದಯ್ ಸಿನಿ ವೆಂಚರ್, ದೀಪ ಫಿಲಂಸ್ ಬ್ಯಾನರ್ ನಡಿ ಉದಯ್ ಮತ್ತು ಶ್ರೀರಾಮ್ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT