‘ರಾಬರ್ಟ್’ ಸಿನಿಮಾದ ಮುಖಾಂತರ ಸಿನಿ ಪಯಣದ ಹೊಸ ಇನಿಂಗ್ಸ್ ಆರಂಭಿಸಿದ್ದ ವಿನೋದ್ ಪ್ರಭಾಕರ್ ಇದೀಗ ಸಾಲು ಸಾಲು ಸಿನಿಮಾಗಳಲ್ಲಿ ನಟಿಸುತ್ತಿದ್ದಾರೆ. ಕೋವಿಡ್ ನಿಯಂತ್ರಕ್ಕೆ ಹೇರಲಾಗಿದ್ದ ನಿರ್ಬಂಧಗಳನ್ನು ಸರ್ಕಾರ ಸಡಿಲಿಸುತ್ತಿರುವ ಬೆನ್ನಲ್ಲೇ ಚಿತ್ರತಂಡಗಳು ಚಿತ್ರ ಬಿಡುಗಡೆ ದಿನಾಂಕವನ್ನು ಘೋಷಿಸುತ್ತಿವೆ. ಈ ಪೈಕಿ ವಿನೋದ್ ಪ್ರಭಾಕರ್ ನಟನೆಯ ‘ವರದ’ ಚಿತ್ರವೂ ಸೇರಿದೆ.

‘ವರದ’ ಚಿತ್ರಕ್ಕೆ ಪ್ರಾದೇಶಿಕ ಸೆನ್ಸಾರ್ ಮಂಡಳಿಯು ಯು/ಎ ಪ್ರಮಾಣಪತ್ರ ನೀಡಿದ್ದು, ಚಿತ್ರವು ಫೆಬ್ರುವರಿ 18ರಂದು ರಾಜ್ಯದಾದ್ಯಂತ ಬಿಡುಗಡೆಯಾಗಲಿದೆ. ಉದಯ ಪ್ರಕಾಶ್ ನಿರ್ಮಿಸಿ, ನಿರ್ದೇಶಿಸಿರುವ ಈ ಚಿತ್ರದ ಸಹ ನಿರ್ಮಾಪಕರು ಸುನಿತಾ ಪ್ರಕಾಶ್. ಆ್ಯಕ್ಷನ್ ಕಥಾಹಂದರ ಹೊಂದಿರುವ ಈ ಚಿತ್ರದಲ್ಲಿ ವಿನೋದ್ ಪ್ರಭಾಕರ್ ಅವರ ತಂದೆ ಪಾತ್ರದಲ್ಲಿ ನಟ ಚರಣ್ ರಾಜ್ ನಟಿಸಿದ್ದಾರೆ. ಅಮಿತ ಈ ಚಿತ್ರದ ನಾಯಕಿ. ಅನಿಲ್ ಸಿದ್ದು, ಎಂ.ಕೆ.ಮಠ, ಅಶ್ವಿನಿ ಗೌಡ, ಗಿರೀಶ್ ಜತ್ತಿ, ಪ್ರಶಾಂತ್ ಸಿದ್ದಿ, ರಾಧ ರಂಗನಾಥ್, ರಾಜೇಶ್ವರಿ, ದುರ್ಗ, ಮಾನಸ, ಅರವಿಂದ್, ರೋಬೊ ಗಣೇಶ್, ಲೋಕೇಶ್, ನಮನ, ರಾಮಸ್ವಾಮಿ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.

ಕೆ. ಕಲ್ಯಾಣ್, ನಂದೀಶ್ ಹಾಗೂ ಚೇತನ್ ಕುಮಾರ್ ಅವರು ಈ ಚಿತ್ರದ ಹಾಡುಗಳನ್ನು ಬರೆದಿದ್ದು, ಪ್ರದೀಪ್ ವರ್ಮ ಸಂಗೀತ ನೀಡಿದ್ದಾರೆ. ವಿನಾಯಕ ರಾಮ್ ಸಂಭಾಷಣೆ ಬರೆದಿದ್ದಾರೆ. ಭಜರಂಗಿ ಆನಂದ್ ಛಾಯಾಗ್ರಹಣ, ಕಂಬಿ ರಾಜು ನೃತ್ಯ ನಿರ್ದೇಶನ ಹಾಗೂ ಡಿಫರೆಂಟ್ ಡ್ಯಾನಿ, ವಿಕ್ರಂ ಮೋರ್(ಕೆಜಿಎಫ್), ಅಶ್ರಫ್ ಗುರ್ಕಲ್ ಸಾಹಸ ನಿರ್ದೇಶನ ಈ ಚಿತ್ರಕ್ಕಿದೆ.

ನಟನೆಯ ಜೊತೆಗೆ ನಿರ್ಮಾಣ ಕ್ಷೇತ್ರಕ್ಕೂ ವಿನೋದ್ ಪ್ರಭಾಕರ್ ಅವರು ಇತ್ತೀಚೆಗೆ ಹೆಜ್ಜೆ ಇಟ್ಟಿದ್ದರು. ತಂದೆ ಟೈಗರ್ ಪ್ರಭಾಕರ್ ಅವರ ನೆನಪಿನಲ್ಲಿ ‘ಟೈಗರ್ ಟಾಕಿಸ್’ ಆರಂಭಿಸಿರುವ ಅವರು ‘ಲಂಕಾಸುರ’ ಎಂಬ ಸಿನಿಮಾ ನಿರ್ಮಾಣ ಮಾಡುತ್ತಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.