ಶುಕ್ರವಾರ, ಜೂನ್ 25, 2021
21 °C

ಮೊಗ್ಗಿನ ಮನಸು ನಿರ್ದೇಶಕರ ಹೊಸ ಸಾಹಸ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

‘ಮೊಗ್ಗಿನ ಮನಸು’ ಚಿತ್ರದ ನಂತರ ನಿರ್ದೇಶಕ ಶಶಾಂಕ್ ಹೊಸ ಪ್ರತಿಭೆಗಳೊಂದಿಗೆ ಚಿತ್ರ ನಿರ್ದೇಶಿಸಲು ಸಜ್ಜಾಗಿದ್ದಾರೆ. ‘ಶಶಾಂಕ್ ಸಿನೆಮಾಸ್’ ಬ್ಯಾನರ್‌ ಅಡಿ ಕನ್ನಡ ಮತ್ತು ತೆಲುಗು ಭಾಷೆಯಲ್ಲಿ ಈ ಚಿತ್ರ ನಿರ್ಮಾಣವಾಗಲಿದೆ. ಚಿತ್ರಕ್ಕೆ ಇನ್ನೂ ಹೆಸರಿಟ್ಟಿಲ್ಲ. ಪ್ರವೀಣ್‌ ಈ ಚಿತ್ರದ ನಾಯಕ. ಹೊಸಪೇಟೆಯವರಾದ ಪ್ರವೀಣ್‌ ವೈದ್ಯರು. ನಟನೆಯ ತರಬೇತಿ ಪಡೆದು ಕ್ಯಾಮೆರಾ ಎದುರಿಸುತ್ತಿದ್ದಾರೆ. ನಾಯಕಿಯ ಹುಡುಕಾಟ ನಡೆದಿದೆ.

ಲಾಕ್‌ಡೌನ್‌ ಮುಗಿದ ಬಳಿಕ ಚಿತ್ರದ ಶೀರ್ಷಿಕೆ ಹಾಗೂ ಫಸ್ಟ್‌ಲುಕ್‌ ಬಿಡುಗಡೆ ಮಾಡುವುದಾಗಿ ಚಿತ್ರತಂಡ ಹೇಳಿದೆ. ಜೂನ್‌ನಲ್ಲಿ ಚಿತ್ರೀಕರಣ ಆರಂಭವಾಗಲಿದೆ. ಜೂನ್ ತಿಂಗಳಲ್ಲಿ ಚಿತ್ರೀಕರಣ ಆರಂಭಿಸಲಿರುವ ಈ ಚಿತ್ರಕ್ಕೆ ಅರ್ಜುನ್ ಜನ್ಯ ಸಂಗೀತ ಸಂಯೋಜಿಸಲಿದ್ದಾರೆ ಎಂದು ಚಿತ್ರತಂಡ ಹೇಳಿದೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು