ಶುಕ್ರವಾರ, ಜನವರಿ 28, 2022
24 °C

ಪುನೀತ್ ರಾಜ್‌ಕುಮಾರ್ ಆರೋಗ್ಯ ಸ್ಥಿತಿ ಗಂಭೀರ: ಆಸ್ಪತ್ರೆಗೆ ಅಭಿಮಾನಿಗಳ ದೌಡು

ಪ್ರಜಾವಾಣಿ ವೆಬ್ ಡೆಸ್ಕ್ Updated:

ಅಕ್ಷರ ಗಾತ್ರ : | |

ಬೆಂಗಳೂರು: ಪುನೀತ್ ರಾಜ್‌ಕುಮಾರ್ ಆರೋಗ್ಯದಲ್ಲಿ ವ್ಯತ್ಯಯ ಉಂಟಾಗಿದ್ದು, ಬೆಂಗಳೂರಿನ ವಿಕ್ರಮ್‌ ಆಸ್ಪತ್ರೆಗೆ ದಾಖಲಿಸಲಾಗಿದೆ.

ಅಸ್ವಸ್ಥಗೊಂಡಿರುವ ಅವರಿಗೆ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಪುನೀತ್ ಅಸ್ವಸ್ಥಗೊಂಡಿರುವ ವಿಚಾರ ತಿಳಿದ ನಟ ಶಿವರಾಜ್ ಕುಮಾರ್ ಮತ್ತು ಕುಟುಂಬಸ್ಥರು ಆಸ್ಪತ್ರೆಗೆ ದೌಡಾಯಿಸಿದ್ದಾರೆ.

ತಜ್ಞ ವೈದ್ಯರ ತಂಡವು ಪುನೀತ್‌ ರಾಜ್‌ಕುಮಾರ್‌ ಅವರಿಗೆ ಚಿಕಿತ್ಸೆ ನೀಡುತ್ತಿದ್ದು, ಆಸ್ಪತ್ರೆ ಬಳಿ ಪೊಲೀಸ್‌ ಬಂದೋಬಸ್ತ್‌ ಏರ್ಪಡಿಸಲಾಗಿದೆ.

ಬೆಂಗಳೂರಿನ ವಿಕ್ರಮ್‌ ಆಸ್ಪತ್ರೆ ಸಚಿವರು, ಪೊಲೀಸ್‌ ಅಧಿಕಾರಿಗಳು ಕೂಡ ಭೇಟಿ ನೀಡಿದ್ದಾರೆ.

ಮತ್ತೊಂದೆಡೆ ಶಿವರಾಜ್ ಕುಮಾರ್ ಅವರ ಚಿತ್ರ ಭಜರಂಗಿ ಕೂಡ ಶುಕ್ರವಾರ ಬಿಡುಗಡೆಯಾಗಿದ್ದು, ಚಿತ್ರಮಂದಿರಗಳಲ್ಲಿ ಪ್ರದರ್ಶನ ಕಾಣುತ್ತಿದೆ.


ಬೆಂಗಳೂರಿನ ವಿಕ್ರಮ್‌ ಆಸ್ಪತ್ರೆ ಬಳಿ ಸೇರಿರುವ ಜನಸಮೂಹ –ಪ್ರಜಾವಾಣಿ ಚಿತ್ರ

ಶುಕ್ರವಾರ ಮುಂಜಾನೆ 7.33ಕ್ಕೆ ಟ್ವೀಟ್‌ ಮಾಡಿದ್ದ ಪುನೀತ್‌ ರಾಜ್‌ಕುಮಾರ್‌ ಅವರು ಭಜರಂಗಿ–2 ತಂಡಕ್ಕೆ ಶುಭಾಶಯ ಕೋರಿದ್ದರು. ಇದಕ್ಕೆ ಶಿವರಾಜ್‌ಕುಮಾರ್‌, ನಿರ್ದೇಶಕ ಎ.ಹರ್ಷ ಹಾಗೂ ಜಯಣ್ಣ ಅವರನ್ನು ಪುನೀತ್‌ ಟ್ಯಾಗ್‌ ಮಾಡಿದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು