‘ಜೊತೆಯಾಗಿ ಹಿತವಾಗಿ’ ಎಂಬ ಸಿನಿಮಾ ಮೂಲಕ ಗುರುತಿಸಿಕೊಂಡಿರುವ ನಟ ಅಗಸ್ತ್ಯ ಅವರ ಹೊಸ ಸಿನಿಮಾದ ಶೀರ್ಷಿಕೆ ಘೋಷಣೆಯಾಗಿದೆ.

ಝೆನ್–ಜಿ ಹಾಗೂ ಝೆನ್–ಆಲ್ಫಾ ಪೀಳಿಗೆಯ ಪ್ರೇಕ್ಷಕರನ್ನು ಕೇಂದ್ರೀಕರಿಸಿಕೊಂಡು ‘ಡಿಂಚಕ್ ಡಿಂಚಕ್’ ಎಂಬ ವಿಶಿಷ್ಟ ಶೀರ್ಷಿಕೆಯನ್ನಿಟ್ಟಿದೆ ಚಿತ್ರತಂಡ. ‘ಹದಿಹರೆಯದ ಮನಸ್ಸುಗಳು ಮತ್ತು ಕೌಟುಂಬಿಕ ಪ್ರೇಕ್ಷಕರನ್ನು ಗುರಿಯಾಗಿಸಿ ಕಥೆಯ ಎಳೆಯನ್ನು ಸಿದ್ಧಪಡಿಸಿಕೊಳ್ಳಲಾಗಿದೆ. ಇದೊಂದು ಕಮರ್ಷಿಯಲ್ ಚಿತ್ರವಾಗಿದ್ದು, ಶೀಘ್ರದಲ್ಲೇ ಶೂಟಿಂಗ್ ಆರಂಭವಾಗಲಿದೆ’ ಎಂದಿದೆ ಚಿತ್ರತಂಡ. ಚಿತ್ರಕ್ಕೆ ಅಗಸ್ತ್ಯ ಅವರೇ ಕಥೆ, ಚಿತ್ರಕಥೆ ಬರೆದು ನಿರ್ದೇಶನ ಮಾಡಲಿದ್ದಾರೆ.

ಶ್ರೀರತ್ನ ಫಿಲಂ ಕಂಪನಿ ನಿರ್ಮಿಸಲಿರುವ ಈ ಚಿತ್ರಕ್ಕೆ ಆನಂದ್ ರಾಜ ವಿಕ್ರಮ ಅವರ ಸಂಗೀತವಿದೆ. ‘ಚಿತ್ರವನ್ನು ತಾಂತ್ರಿಕವಾಗಿ ಶ್ರೀಮಂತಗೊಳಿಸಲು ಅತ್ಯಾಧುನಿಕ ತಂತ್ರಜ್ಞಾನ ಹಾಗೂ ಕ್ಯಾಮೆರಾ ಮತ್ತಿತರ ಸಲಕರಣೆಗಳನ್ನು ಉಪಯೋಗಿಸಲಾಗುವುದು’ ಎಂದು ಶ್ರೀರತ್ನ ಫಿಲಂ ಕಂಪನಿಯ ಕ್ರಿಯೇಟಿವ್ ಹೆಡ್ ಪ್ರಶಾಂತ ಬಾಗೂರು ತಿಳಿಸಿದ್ದಾರೆ. ಕಲಾವಿದರು ಹಾಗೂ ತಾಂತ್ರಿಕ ವರ್ಗದ ಆಯ್ಕೆ ಇನ್ನಷ್ಟೇ ಆಗಬೇಕಿದೆ. v

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260514-51-991036786

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.