ಚಂದನವನದ ಪ್ರತಿಭೆಗಳನ್ನು ಗುರುತಿಸುವ ‘ಪ್ರಜಾವಾಣಿ ಕನ್ನಡ ಸಿನಿ ಸಮ್ಮಾನ’ದ ನಾಲ್ಕನೇ ಆವೃತ್ತಿಯ ಸಮಾರಂಭವು ಜೂನ್ 19ರಂದು ನಡೆಯಲಿದೆ. ಪ್ರಶಸ್ತಿಗಳಿಗೆ ನಾಮನಿರ್ದೇಶನಗೊಂಡವರ ಹೆಸರುಗಳು ಹಾಗೂ ಸಿನಿಮಾಗಳ ವಿವರಗಳು ಮೇ 28ರಿಂದ ಪ್ರಕಟವಾಗಲಿದೆ.

ಒಟ್ಟು 27 ವಿಭಾಗಗಳಲ್ಲಿ ಪ್ರಶಸ್ತಿಗಳು ಇರಲಿವೆ. ನಾಲ್ಕನೇ ಆವೃತ್ತಿಗೆ 2025ರಲ್ಲಿ ತೆರೆಕಂಡ ಸಿನಿಮಾಗಳನ್ನು ಪರಿಗಣಿಸಲಾಗಿದೆ. 150ಕ್ಕೂ ಅಧಿಕ ಸಿನಿಮಾಗಳು ಈ ವರ್ಷದ ಪ್ರಶಸ್ತಿಗೆ ಸ್ಪರ್ಧಿಸಿದ್ದವು. ‘ಸಿನಿ ಸಮ್ಮಾನ’ದ 21 ತಾಂತ್ರಿಕ ತೀರ್ಪುಗಾರರು ಈ ಸಿನಿಮಾಗಳನ್ನು ವೀಕ್ಷಿಸಿ ನಾಮನಿರ್ದೇಶನಗಳನ್ನು ಸಿದ್ಧಪಡಿಸಿದ್ದಾರೆ. ಈ ಪಟ್ಟಿಯು ಇದೀಗ ‘ಸಿನಿ ಸಮ್ಮಾನ’ದ ಮುಖ್ಯತೀರ್ಪುಗಾರರ ಕೈಸೇರಿದ್ದು, ಶೀಘ್ರದಲ್ಲೇ ಅಂತಿಮ ಮುದ್ರೆ ಬೀಳಲಿದೆ. ವಿಜೇತರ ಆಯ್ಕೆಗಾಗಿ ಚಿತ್ರರಂಗದ ಸಾವಿರಕ್ಕೂ ಹೆಚ್ಚು ಜನರಿಂದ ಮತದಾನ ನಡೆಯಲಿದೆ. ಚಿತ್ರರಂಗದ ಪ್ರಮುಖ ಸಂಘ-ಸಂಸ್ಥೆಗಳ ಸದಸ್ಯರು ಮತದಾನದ ಮೂಲಕ ನಾಮನಿರ್ದೇಶಿತರಾದವರಲ್ಲಿ ಒಬ್ಬರನ್ನು ಆಯ್ಕೆ ಮಾಡಲಿದ್ದಾರೆ. v

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260527-51-1003467814

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.