ಬೆಂಗಳೂರು: ಕನ್ನಡ ಚಿತ್ರ ನಿರ್ಮಾಪಕ, ನಿರ್ದೇಶಕ ಮುರಳಿ ಕೃಷ್ಣ(63) ಹೃದಯಘಾತದಿಂದ ಸೋಮವಾರ ರಾತ್ರಿ ನಿಧನ ಹೊಂದಿದ್ದಾರೆ.

ಬ್ರೈನ್ ಟ್ಯೂಮರ್ನಿಂದ ಬಳಲುತ್ತಿದ್ದ ಕೃಷ್ಣ ಅವರನ್ನು ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಟ್ಯೂಮರ್ ಶಸ್ತ್ರ ಚಿಕಿತ್ಸೆ ಫಲಕಾರಿಯಾದರೂ, ಹೃದಯಾಘಾತದಿಂದ ನಿಧನರಾಗಿದ್ದಾರೆ.

ಸತ್ಯ, ಗರ ಚಿತ್ರಗಳನ್ನು ನಿರ್ದೇಶಿಸಿದ್ದರು. ಗರ ಸಿನಿಮಾಗಾಗಿ ಬಾಲಿವುಡ್ ನ ಜಾನಿ ಲಿವರ್'ನ ಕನ್ನಡಕ್ಕೆ ಕರೆತಂದಿದ್ದರು. ಮೃತರು ಇಬ್ಬರು ಹೆಣ್ಣು ಮಕ್ಕಳು, ಪತ್ನಿಯನ್ನು ಅಗಲಿದ್ದಾರೆ. ಸಹಕಾರ ನಗರದ ತಮ್ಮ ನಿವಾಸದಲ್ಲಿ ಅಂತಿಮ ದರ್ಶನಕ್ಕೆ ಅವಕಾಶ ನೀಡಲಾಗಿದ್ದು, ಮಂಗಳವಾರ ಮಧ್ಯಾಹ್ನ 12:30ಕ್ಕೆ ಹೆಬ್ಬಾಳ ಚಿತಾಗಾರದಲ್ಲಿ ಅಂತ್ಯಕ್ರಿಯೆ ನಡೆಯಲಿದೆ.

ವೃತ್ತಿಯಿಂದ ವಕೀಲರಾಗಿದ್ದ ಅವರು, ಬಾಳನೌಕೆ, ಕರ್ಣನ ಸಂಪತ್ತು, ಹೃದಯ ಸಾಮ್ರಾಜ್ಯ, ಮರಳಿ ಗೂಡಿಗೆ ಸಿನಿಮಾಗಳನ್ನ ನಿರ್ಮಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.