ಗುರುವಾರ , ಜೂನ್ 24, 2021
29 °C

ಕವಿರತ್ನ ಕಾಳಿದಾಸ ಚಿತ್ರ ನಿರ್ದೇಶಕ ರೇಣುಕಾ ಶರ್ಮಾ ಕೋವಿಡ್‌ನಿಂದ ಸಾವು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕವಿರತ್ನ ಕಾಳಿದಾಸ, ಅಂಜದ ಗಂಡು, ಕಿಂದರಿ ಜೋಗಿ, ಅಂತಹ ಹಿಟ್, ಸೂಪರ್ ಹಿಟ್ ಸಿನಿಮಾಗಳನ್ನು ನೀಡಿದ್ದ ನಿರ್ದೇಶಕ ರೇಣುಕಾ ಶರ್ಮಾ(81) ಕೋವಿಡ್‌ಗೆ ಬಲಿಯಾಗಿದ್ದಾರೆ.

ಸೋಂಕಿಗೆ ತುತ್ತಾಗಿದ್ದ ಅವರನ್ನು ಗಿರಿನಗರ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆಗೆ ಸ್ಪಂದಿಸದೇ ಅವರು ನಿಧನರಾಗಿದ್ದಾರೆ ಎಂದು ಕುಟುಂಬದವರು ತಿಳಿಸಿದ್ದಾರೆ.

1981ರಲ್ಲಿ ಅನುಪಮ ಚಿತ್ರದ ಮೂಲಕ ಅವರು ನಿರ್ದೇಶನ ಕ್ಷೇತ್ರಕ್ಕೆ ಬಂದಿದ್ದರು. ‘ಶಹಬ್ಬಾಸ್ ವಿಕ್ರಮ್’, ‘ಸತ್ಕಾರ’ ಹಾಗೂ ‘ನಮ್ಮ ಊರ ದೇವತೆ’, ‘ಶಬರಿಮಲೆ ಶ್ರೀ ಅಯ್ಯಪ್ಪ’, ‘ಭರ್ಜರಿ ಗಂಡು’ ಹಾಗೂ ‘ಹಠಮಾರಿ ಹೆಣ್ಣು ಕಿಲಾಡಿ ಗಂಡು’, ‘ಕೊಲ್ಲೂರು ಶ್ರೀ ಮೂಕಾಂಬಿಕೆ’ ಅವರ ನಿರ್ದೇಶನದ ಸೂಪರ್ ಹಿಟ್  ಚಿತ್ರಗಳು.

ಶರ್ಮಾ ಅವರಿಗೆ ಪತ್ನಿ ಇಬ್ಬರು ಹೆಣ್ಣು ಮಕ್ಕಳು ಇದ್ದಾರೆ. ಇಂದು ಬೆಂಗಳೂರಿನಲ್ಲಿ ಅಂತ್ಯ ಸಂಸ್ಕಾರ ನಡೆಯಲಿದೆ ಎಂದು ಕುಟುಂಬದವರು ತಿಳಿಸಿದ್ದಾರೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು