‘ಎಲ್ಲೋ ಜೋಗಪ್ಪ’ ಎನ್ನುತ್ತ ಹೊರಟ ಹಯವದನ್!

ಕಮಲಿ, ಅಗ್ನಿಸಾಕ್ಷಿ, ನಾಗಿಣಿಯಂತಹ ಜನಪ್ರಿಯ ಧಾರಾವಾಹಿಗಳನ್ನು ನಿರ್ದೇಶಿಸಿದ್ದ ಹಯವದನ್ ಸಿನಿಮಾದತ್ತ ಹೊರಳಿದ್ದಾರೆ. ಚಿತ್ರದ ಶೀರ್ಷಿಕೆಯೊಂದಿಗೆ ಮೊದಲ ಪೋಸ್ಟರ್ ಅನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡಿದ್ದಾರೆ.
‘ಎಲ್ಲೋ ಜೋಗಪ್ಪ ನಿನ್ನರಮನೆ’ ಚಿತ್ರದ ಶೀರ್ಷಿಕೆ. ‘ಕಂಬ್ಳಿಹುಳ’ ಚಿತ್ರದಲ್ಲಿ ನಾಯಕನಾಗಿದ್ದ ಅಂಜನ್ ನಾಗೇಂದ್ರ ಈ ಚಿತ್ರದ ನಾಯಕ. ಪವನ್ ಶಿಮಿಕೇರಿ ಮತ್ತು ಸಿಂಧು ಹಯವದನ್ ಚಿತ್ರದ ನಿರ್ಮಾಪಕರು. ಶಿವಪ್ರಸಾದ್ ಸಂಗೀತ ನಿರ್ದೇಶನ ಚಿತ್ರಕ್ಕಿದೆ.
‘ತಂದೆ ಮಗನ ಜನರೇಷನ್ ಗ್ಯಾಪ್‌ನ ಗುದ್ದಾಟ. ನವೀರಾದ ಪ್ರೇಮಕಥೆ’ ಎಂದು ಹಯವದನ್ ತಮ್ಮ ಚಿತ್ರದ ಕುರಿತು ಪ್ರಾಥಮಿಕ ಮಾಹಿತಿ ನೀಡಿದ್ದಾರೆ. ಏನನ್ನೋ ಹುಡುಕಿಕೊಂಡು ಬುದ್ಧ ಗಯಾದತ್ತ ಹೋಗುವ ಹುಡುಗನ ಕಥೆ ಎಂಬುದನ್ನು ನವೀರಾದ ಪೋಸ್ಟರ್ ಹೇಳುತ್ತಿದೆ.
ಡಾಲಿ, ಕ್ಷಮಿಸಿ ನಿಮ್ಮ ಖಾತೆಯಲ್ಲಿ ಹಣವಿಲ್ಲ ಮೊದಲಾದ ಚಿತ್ರಕ್ಕೆ ಸಂಭಾಷಣೆ ರಚಿಸಿದ್ದ ವೇಣು ಹಸ್ರಾಳಿ ಸಂಭಾಷಣೆ ಬರೆದಿದ್ದಾರೆ. ಮುಂದಿನ ತಿಂಗಳಿನಿಂದ ಚಿತ್ರೀಕರಣ ಪ್ರಾರಂಭವಾಗಲಿದೆ. ಬೆಂಗಳೂರು ಸೇರಿದಂತೆ ದೇಶದ ಬೇರೆ ಬೇರೆ ಜಾಗಗಳಲ್ಲಿ ಚಿತ್ರೀಕರಣ ನಡೆಯಲಿದೆ. ಇದೊಂದು ಪ್ರಯಾಣದ ಕಥೆ ಎಂದು ಚಿತ್ರತಂಡ ಹೇಳಿದೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.