ಪ್ರಕಾಶ್ ರಾಜ್ ಮತ್ತು ಡಾರ್ಲಿಂಗ್ ಕೃಷ್ಣ ಪ್ರಮುಖ ಪಾತ್ರದಲ್ಲಿ ನಟಿಸಿರುವ ‘ಫಾದರ್’ ಚಿತ್ರದ ಡಬ್ಬಿಂಗ್ ಇತ್ತೀಚೆಗಷ್ಟೇ ಪೂರ್ಣಗೊಂಡಿದೆ. ಪೋಸ್ಟ್ ಪ್ರೊಡಕ್ಷನ್ ಹಂತದಲ್ಲಿರುವ ರಾಜ್ ಮೋಹನ್ ನಿರ್ದೇಶನದ ಚಿತ್ರ ಶೀಘ್ರದಲ್ಲಿ ತೆರೆಗೆ ಬರಲಿದೆ.

‘ಫಾದರ್’ ಎಂದರೆ ಒಂದು ಶಕ್ತಿ. ತಮ್ಮ ನಟನೆ ಮೂಲಕ ಎಲ್ಲರ ಗಮನ ಸೆಳೆಯುವ ಪ್ರಕಾಶ್ ರಾಜ್ ತಂದೆ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ತಂದೆ - ಮಗನ ಬಾಂಧವ್ಯದ ಕಥೆಯಿದ್ದು, ಮಗನಾಗಿ ಡಾರ್ಲಿಂಗ್ ಕೃಷ್ಣ ನಟಿಸಿದ್ದಾರೆ. ಅಮೃತಾ ಅಯ್ಯಂಗಾರ್ ಅವರಿಗೆ ಜೋಡಿಯಾಗಿದ್ದಾರೆ. ನೋಡುಗರನ್ನು ಭಾವುಕ ಲೋಕಕ್ಕೆ ಕರೆದುಕೊಂಡು ಹೋಗುವ ಕಥೆಯಿದು. ಈಗಾಗಲೇ ಬಿಡುಗಡೆಗೊಂಡಿರುವ ಚಿತ್ರದ ಟೀಸರ್ಗೆ ಪ್ರೇಕ್ಷಕರಿಂದ ಮೆಚ್ಚುಗೆ ವ್ಯಕ್ತವಾಗಿದೆ’ ಎಂದಿದೆ ಚಿತ್ರತಂಡ.

ಆರ್.ಸಿ. ಸ್ಟುಡಿಯೋಸ್ ಮೂಲಕ ಆರ್.ಚಂದ್ರು ಚಿತ್ರಕ್ಕೆ ಬಂಡವಾಳ ಹೂಡಿದ್ದಾರೆ. ಸುಜ್ಞಾನ್ ಛಾಯಾಚಿತ್ರಗ್ರಹಣ, ನಕುಲ್ ಅಭ್ಯಂಕರ್ ಸಂಗೀತ ಸಂಯೋಜನೆ ಚಿತ್ರಕ್ಕಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260413-51-437505163

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.