ಶನಿವಾರ, 22 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT

ಶ್ರೇಯಸ್‌ ಈಗ ‘ರಾಣ’

Last Updated 1 ಜುಲೈ 2021, 19:30 IST
ಅಕ್ಷರ ಗಾತ್ರ

ಖ್ಯಾತ ನಿರ್ಮಾಪಕ ಕೆ.ಮಂಜು ಅವರ ಪುತ್ರ ಶ್ರೇಯಸ್‌ ಅವರು ನಾಯಕನಾಗಿ ನಟಿಸುತ್ತಿರುವ ನೂತನ ಚಿತ್ರದ ಶೀರ್ಷಿಕೆ ಅನಾವರಣ ಗುರುವಾರ ಬೆಳಗ್ಗೆ ಮೋದಿ‌ ಆಸ್ಪತ್ರೆ ಬಳಿಯ ಗಣಪತಿ ದೇವಸ್ಥಾನದಲ್ಲಿ ನೆರವೇರಿತು. ‘ಅಧ್ಯಕ್ಷ’, ‘ರನ್ನ’, ‘ಪೊಗರು’ನಂತಹ ಯಶಸ್ವಿ ಚಿತ್ರಗಳನ್ನು ನಿರ್ದೇಶಿಸಿದ ನಂದ ಕಿಶೋರ್ ಈ ಹೊಸ ಚಿತ್ರ ‘ರಾಣ’ವನ್ನು ನಿರ್ದೇಶಿಸುತ್ತಿದ್ದಾರೆ.

ಜುಲೈ 7ರಂದು ‘ರಾಣ’ ಚಿತ್ರದ ಮುಹೂರ್ತ ಸಮಾರಂಭ ನಡೆಯಲಿದೆ.

ಈ ಚಿತ್ರದ ಶೀರ್ಷಿಕೆ ಮೊದಲು ನಿರ್ಮಾಪಕ ರಮೇಶ್ ಕಶ್ಯಪ್ ಅವರ ಬಳಿಯಿತ್ತು. ರಾಕಿಂಗ್ ಸ್ಟಾರ್‌ ಯಶ್ ಅವರು ‘ರಾಣ’ ಚಿತ್ರದಲ್ಲಿ ಅಭಿನಯಿಸಬೇಕಿತ್ತು. ರಮೇಶ್ ಕಶ್ಯಪ್ ಅವರು ನಮಗಾಗಿ ಈ ಶೀರ್ಷಿಕೆ ಬಿಟ್ಟುಕೊಟ್ಟಿದ್ದಾರೆ. ಶೀರ್ಷಿಕೆ ಬಿಟ್ಟುಕೊಟ್ಟಿರುವುದಕ್ಕೆ ನಿರ್ಮಾಪಕ ಪುರುಷೋತ್ತಮ ಗುಜ್ಜಾಲ್ ಹಾಗೂ ಕೆ.ಮಂಜು ಧನ್ಯವಾದ ತಿಳಿಸಿದ್ದಾರೆ. ಚಿತ್ರಕ್ಕೆ ಚಂದನ್ ಶೆಟ್ಟಿ ಸಂಗೀತ ನೀಡುತ್ತಿದ್ದು, ಶೇಖರ್ ಚಂದ್ರು ಛಾಯಾಗ್ರಹಣವಿದೆ. ನಾಯಕಿಯಾಗಿ ರೇಶ್ಮಾ ನಾಣಯ್ಯ ಅಭಿನಯಿಸುತ್ತಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT