‘ಲವ್ ಬರ್ಡ್ಸ್’, ‘ಬ್ಯಾಡ್’ ಸಿನಿಮಾ ಬಳಿಕ ಪಿ.ಸಿ.ಶೇಖರ್ ಆ್ಯಕ್ಷನ್ ಕಟ್ ಹೇಳಿರುವ ‘ಮಹಾನ್’ ಚಿತ್ರದ ಫಸ್ಟ್ಲುಕ್ ಇತ್ತೀಚೆಗೆ ಬಿಡುಗಡೆಯಾಗಿದೆ.

ಸಿನಿಮಾದಲ್ಲಿ ನಾಯಕನಾಗಿ ವಿಜಯ ರಾಘವೇಂದ್ರ ನಟಿಸಿದ್ದು, ರೈತನಾಗಿ ಅವರು ಬಣ್ಣಹಚ್ಚಿದ್ದಾರೆ. ಆಕಾಶ್ ಪಿಕ್ಚರ್ಸ್ ಲಾಂಛನದಲ್ಲಿ ಪ್ರಕಾಶ್ ಈ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ. ‘ಇದು ದೇಶಕ್ಕೆ ಅನ್ನ ನೀಡುವ ಅನ್ನದಾತನಾದ ರೈತನ ಕುರಿತಾದ ಕಥೆ. ಹಾಗಾಗಿ ಚಿತ್ರಕ್ಕೆ ‘ಮಹಾನ್’ ಎಂದು ಹೆಸರಿಡಲಾಗಿದೆ. ವಿಜಯ ರಾಘವೇಂದ್ರ ಅವರ ಜನ್ಮದಿನದ ಪ್ರಯುಕ್ತ ಅವರ ಪಾತ್ರದ ಲುಕ್ ಬಿಡುಗಡೆ ಮಾಡಿದ್ದೇವೆ’ ಎಂದಿದ್ದಾರೆ ಪಿ.ಸಿ.ಶೇಖರ್.

ಇದು ಪಿ.ಸಿ.ಶೇಖರ್ ಅವರು ನಿರ್ದೇಶಿಸುತ್ತಿರುವ ಹನ್ನೊಂದನೇ ಚಿತ್ರವಾಗಿದೆ. ವಿಜಯ ರಾಘವೇಂದ್ರ, ರಾಧಿಕಾ ನಾರಾಯಣ್, ಮಿತ್ರ, ನಮ್ರತಾ ಗೌಡ, ವರ್ಷ ಬೊಳ್ಳಮ್ಮ, ಕಿರಣ್ ಶ್ರೀನಿವಾಸ್ ಮುಂತಾದವರು ಚಿತ್ರದ ತಾರಾಬಳಗದಲ್ಲಿದ್ದು, ಶೀಘ್ರದಲ್ಲೇ ಸಿನಿಮಾ ತೆರೆಗೆ ಬರಲಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260527-51-1658286259

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.