ವಂಚಕರ ಜಾಲದಲ್ಲಿ ಸಿಲುಕಿಕೊಳ್ಳುವ ಹೆಣ್ಣುಮಕ್ಕಳ ಕುರಿತಾದ ಕಥೆಯನ್ನು ಹೊಂದಿರುವ ‘ಮೃತ್ಯುದೇವತೆ’ ಚಿತ್ರ ಶೀಘ್ರದಲ್ಲಿ ತೆರೆಗೆ ಬರಲು ಸಜ್ಜಾಗಿದೆ. ಚಿತ್ರಕ್ಕೆ ನವೀನ್ ಮಹದೇವ್ ನಿರ್ದೇಶನವಿದೆ. ಚಿತ್ರದ ‘ನಮ್ಮಾವ ಮಾದೇವ’ ಹಾಡು ಇತ್ತೀಚೆಗಷ್ಟೇ ಬಿಡುಗಡೆಗೊಂಡಿದೆ.

‘ಈಗಿನ ಸಮಾಜದಲ್ಲಿ ಮಹಿಳೆಯರು ವಂಚಕರ ಜಾಲದಲ್ಲಿ ಹೇಗೆ ಸಿಲುಕಿಕೊಳ್ಳುತ್ತಿದ್ದಾರೆ?, ನಂತರ ಅದರಿಂದ ಹೊರಬರಲು ಹೇಗೆ ಪ್ರಯತ್ನಿಸುತ್ತಾರೆ ಎಂಬುದೇ ಕಥೆ. ಅಂಥವರಿಗೆ ಶಿಕ್ಷಿಸಲು ಯಾವೆಲ್ಲ ಅವತಾರ ತಾಳುತ್ತಾರೆ ಎಂಬುದನ್ನು ಹೇಳಿದ್ದೇವೆ. ಈ ಹಿಂದೆ ಚಿತ್ರದ ಬಿಡುಗಡೆ ದಿನಾಂಕ ಘೋಷಿಸಿದ್ದೆವು. ತಾಂತ್ರಿಕ ಕಾರಣಗಳಿಂದ ಬಿಡುಗಡೆ ತಡವಾಗಿದೆ. ಶೀಘ್ರದಲ್ಲಿ ಚಿತ್ರ ಬಿಡುಗಡೆ ದಿನಾಂಕ ಘೋಷಿಸುತ್ತೇವೆ’ ಎಂದರು ನಿರ್ದೇಶಕ.

‘ಈ ಸಿನಿಮಾ ಕೇವಲ ಮನೋರಂಜನೆಗಾಗಿ ಅಲ್ಲ, ಸಮಾಜದಲ್ಲಿ ಬದಲಾವಣೆ ಆಗಬೇಕು ಎಂಬ ಉದ್ದೇಶದಿಂದ ಮಾಡಿರುವುದು. ಚಿತ್ರ ಎಷ್ಟೋ ಜನರಿಗೆ ಪ್ರೇರಣೆಯಾಗುತ್ತದೆ. ಹೆಣ್ಣುಮಕ್ಕಳ ಜತೆ ತಂದೆ, ತಾಯಿ ಬಂದು ಸಿನಿಮಾ ನೋಡಬೇಕು. ಹೆಣ್ಣಿನ ಸಹನೆಯ ಕಟ್ಟೆ ಒಡೆದಾಗ ಏನಾಗುತ್ತದೆ ಎಂಬುದನ್ನು ಚಿತ್ರದಲ್ಲಿ ಹೇಳಿದ್ದೇವೆ. ಆರತಿ ಎಂಬ ಪಾತ್ರದಲ್ಲಿ ಕಾಣಿಸಿಕೊಂಡಿರುವೆ’ ಎಂದರು ನಾಯಕಿ ಸಾರಿಕಾ ರಾವ್.

ವಿನಯಾ ಪ್ರಕಾಶ್, ಹಿಮಶ್ರೀ, ಮಾಹೀನ್ ಪ್ರಮುಖ ಪಾತ್ರಗಳಲ್ಲಿದ್ದಾರೆ. ನಿರ್ದೇಶಕರೇ ನಾಯಕನಾಗಿ ಕಾಣಿಸಿಕೊಂಡಿದ್ದಾರೆ. ಪವನ್ ಶೆಟ್ಟಿ, ಸೂರ್ಯ ಮುಂತಾದವರು ಚಿತ್ರದಲ್ಲಿದ್ದಾರೆ. ಅನಿರುದ್ಧ ಛಾಯಾಚಿತ್ರಗ್ರಹಣ, ಶಿವಪ್ರಸಾದ್ ಸಂಗೀತ ನಿರ್ದೇಶನ, ಮಂಜು ವಿಕ್ರಂ ಸಂಕಲನ ಚಿತ್ರಕ್ಕಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.