ಪುನೀತ್ ರಾಜಕುಮಾರ್ ಅವರ ಆದರ್ಶಗಳನ್ನೇ ಕಥೆಯಾಗಿಸಿಕೊಂಡಿರುವ ‘ಪುನೀತ್ ನಿವಾಸ’ ಚಿತ್ರ ಇತ್ತೀಚೆಗಷ್ಟೇ ಸೆಟ್ಟೇರಿದೆ. ಅಶ್ವಿನಿ ಪುನೀತ್ ರಾಜಕುಮಾರ್, ರಾಘವೇಂದ್ರ ರಾಜಕುಮಾರ್ ಚಿತ್ರದ ಫಸ್ಟ್ಲುಕ್ ಬಿಡುಗಡೆಗೊಳಿಸಿ ತಂಡಕ್ಕೆ ಶುಭ ಹಾರೈಸಿದರು. ಪುಟ್ಟಣ್ಣ ಕಣಗಾಲ್ರಂಥ ಹಿರಿಯ ನಿರ್ದೇಶಕರ ಜತೆ ಸಹಾಯಕರಾಗಿ ಕೆಲಸ ಮಾಡಿದ್ದ ನಾಗೇಂದ್ರ ಪ್ರಸಾದ್ ಈ ಚಿತ್ರಕ್ಕೆ ಕಥೆ, ಚಿತ್ರಕಥೆ ಬರೆದು ಆ್ಯಕ್ಷನ್ ಕಟ್ ಹೇಳುತ್ತಿದ್ದಾರೆ.

‘ಪುನೀತ್ ರಾಜಕುಮಾರ್ ಅವರ ಅಪ್ಪಟ ಅಭಿಮಾನಿಯಾದ ‘ಮಲ್ಲು’ ಎಂಬ ಹುಡುಗನ ಕಥೆಯಿದು. ತಾನೊಂದು ಸಿನಿಮಾ ಮಾಡಬೇಕೆಂದು ಕೂಡಿಟ್ಟುಕೊಂಡಿದ್ದ ಹಣದಿಂದ ಬಡ ಹುಡುಗಿಗೆ ಮನೆ ಕಟ್ಟಿಸಿಕೊಟ್ಟು, ಅದಕ್ಕೆ ಪುನೀತ್ ನಿವಾಸ ಎಂದು ಹೆಸರಿಡುತ್ತಾನೆ. ಬೆಂಗಳೂರು ಸುತ್ತಮುತ್ತ ಒಂದೇ ಹಂತದಲ್ಲಿ ಚಿತ್ರೀಕರಣ ನಡೆಸುವ ಯೋಜನೆ ಹಾಕಿಕೊಳ್ಳಲಾಗಿದೆ’ ಎಂದರು ನಿರ್ದೇಶಕರು.

ಪಂಚಮಿ ಸಿನಿ ಕ್ರಿಯೇಶನ್ಸ್ ಮೂಲಕ ಮೋಹನ್ ಎಸ್. ಈ ಚಿತ್ರವನ್ನು ನಿರ್ಮಿಸುತ್ತಿದ್ದಾರೆ. ಅಭಿಜಿತ್, ಮಾಸ್ಟರ್ ವಿಠ್ಠಲ್ ಪ್ರಮುಖ ಪಾತ್ರದಲ್ಲಿದ್ದಾರೆ. ಎಂ.ಎಸ್.ಉಮೇಶ್, ಡಿಂಗ್ರಿ ನಾಗರಾಜ್, ಟೆನ್ನಿಸ್ ಕೃಷ್ಣ, ಲಕ್ಷ್ಮಿ ಭಟ್, ರೇಖಾ ದಾಸ್, ಗಣೇಶ್ ರಾವ್ ಕೇಸರಕರ್ ಮುಂತಾದವರು ತಾರಾಗಣದಲ್ಲಿದ್ದಾರೆ. ಕೃಪಾಕರ್ ಸಂಗೀತ ಸಂಯೋಜನೆ, ಬಾಲು ಛಾಯಾಚಿತ್ರಗ್ರಹಣ, ಮುತ್ತುರಾಜ್ ಸಂಕಲನ ಈ ಚಿತ್ರಕ್ಕಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.