ಸೂಲಗಿತ್ತಿಯೊಬ್ಬಳ ಬದುಕಿನ ಕಥೆಯನ್ನು ಹೊಂದಿರುವ ‘ತಾಯವ್ವ’ ಕೆಲ ದಿನಗಳ ಹಿಂದೆ ತೆರೆಕಂಡಿತ್ತು. ಇದರ ಬೆನ್ನಲೇ ಚಿತ್ರತಂಡ ಚಿತ್ರ ಕುರಿತು ಗಣ್ಯರೊಂದಿಗೆ ಮಾತುಕತೆ ಹಮ್ಮಿಕೊಂಡಿತ್ತು. ನಟ ಸುರೇಶ್ ಹೆಬ್ಳೀಕರ್, ಸಂಗೀತ ನಿರ್ದೇಶಕ ಕೆ. ಕಲ್ಯಾಣ್, ಲಹರಿ ವೇಲು, ನಿರ್ದೇಶಕರಾದ ಯೋಗರಾಜ್ ಭಟ್, ಹರಿಪ್ರಸಾದ್ ಜಯಣ್ಣ, ನಿರ್ಮಾಪಕ ಸಿಲ್ಕ್ ಮಂಜು ಮುಂತಾದವರು ಈ ಕಾರ್ಯಕ್ರಮದಲ್ಲಿ ಭಾಗಿಯಾಗಿ ಚಿತ್ರ ಕುರಿತು ಮೆಚ್ಚುಗೆ ವ್ಯಕ್ತಪಡಿಸಿದರು.

‘ಅಮರ ಫಿಲಂಸ್’ ಬ್ಯಾನರಿನಲ್ಲಿ ಗೀತಪ್ರಿಯಾ ನಿರ್ಮಿಸಿ, ಮುಖ್ಯಭೂಮಿಕೆಯಲ್ಲಿ ಅಭಿನಯಿಸಿರುವ ‘ತಾಯವ್ವ’ ಮಹಿಳಾ ಪ್ರದಾನ ಕಥಾಹಂದರವನ್ನು ಹೊಂದಿದೆ. ‘ಸೂಲಗಿತ್ತಿಯೊಬ್ಬಳ ಬದುಕಿನ ಅನಾವರಣ ‘ತಾಯವ್ವ’ ಸಿನಿಮಾದ ಮೂಲಕ ಮಾಡಿದ್ದೇವೆ. ಸೂಲಗಿತ್ತಿ ನರಸಮ್ಮ ಅವರಂಥ ನಮ್ಮ ಗ್ರಾಮೀಣ ಭಾಗದ ಅನೇಕ ಸೂಲಗಿತ್ತಿಯರನ್ನು ಪ್ರೇರಣೆಯಾಗಿ ತೆಗೆದುಕೊಂಡು ಈ ಸಿನಿಮಾ ಮಾಡಿದ್ದೇವೆ. ಹೆಣ್ಣು ಮಕ್ಕಳನ್ನು ಉಳಿಸಿ, ಬೆಳೆಸಿ ಎಂಬ ಸಂದೇಶ ಸಿನಿಮಾ ನೋಡಿದ ಪ್ರತಿಯೊಬ್ಬರ ಮನಮುಟ್ಟಿದೆ’ ಎಂದರು ಗೀತಪ್ರಿಯಾ.

ಸಾತ್ವಿಕ್ ಪವನ್ ಕುಮಾರ್ ನಿರ್ದೇಶನದ ಚಿತ್ರವಿದು. ಅನಂತ ಆರ್ಯನ್ ಸಂಗೀತ ನೀಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.