ನಾಗಭೂಷಣ್ ಮುಖ್ಯಭೂಮಿಕೆಯಲ್ಲಿ ನಟಿಸಿದ್ದ ‘ಟಗರುಪಲ್ಯ’ ಸಿನಿಮಾದ ನಿರ್ದೇಶಕ ಉಮೇಶ್ ಕೆ.ಕೃಪ ನಿರ್ದೇಶನದ ಎರಡನೇ ಚಿತ್ರ ಇತ್ತೀಚೆಗೆ ಸೆಟ್ಟೇರಿದೆ.

ಆಕಾಂಕ್ಷ ಪ್ರೊಡಕ್ಷನ್ಸ್ ಲಾಂಛನದಲ್ಲಿ ನಾಗೇಶ್ ವಾಸ್ಟರ್ ಅವರು ಈ ಸಿನಿಮಾ ನಿರ್ಮಾಣ ಮಾಡುತ್ತಿದ್ದು, ಚಿತ್ರಕ್ಕೆ ಸದ್ಯ ‘ಪ್ರೊಡಕ್ಷನ್ ನಂ 2’ ಎಂಬ ಶೀರ್ಷಿಕೆ ಇಡಲಾಗಿದೆ.

‘ಇದು ನನ್ನ ನಿರ್ದೇಶನದ ಎರಡನೇ ಸಿನಿಮಾ’ ಎಂದು ಮಾತು ಆರಂಭಿಸಿದ ಉಮೇಶ್, ‘ಟಗರುಪಲ್ಯ ಚಿತ್ರಕ್ಕೆ ಸಿಕ್ಕ ಪ್ರೀತಿ, ಪ್ರೋತ್ಸಾಹಕ್ಕೆ ಧನ್ಯವಾದ. ಈ ಹೊಸ ಚಿತ್ರಕ್ಕೆ ನಾನೇ ಕಥೆ, ಚಿತ್ರಕಥೆ ಹಾಗೂ ಸಂಭಾಷಣೆ ಬರೆದಿದ್ದೇನೆ. ಎಸ್.ಕೆ.ರಾವ್ ಛಾಯಾಚಿತ್ರಗ್ರಹಣ, ಪಳನಿ ಡಿ ಸೇನಾಪತಿ ಸಂಗೀತ ನಿರ್ದೇಶನ, ಮಧು ತುಂಬಕೆರೆ ಸಂಕಲನ, ಅರ್ಜುನ್ ರಾಜ್ ಸಾಹಸ ನಿರ್ದೇಶನ ಹಾಗೂ ಎ.ಸತೀಶ್ ಅವರ ಕಲಾ ನಿರ್ದೇಶನ ಈ ಚಿತ್ರಕ್ಕಿರಲಿದೆ’ ಎಂದರು.

‘ಈ ಚಿತ್ರಕ್ಕೆ ಕಥೆಯೇ ನಾಯಕ. ನನ್ನ ಹಿಂದಿನ ಚಿತ್ರದಂತೆ ಈ ಚಿತ್ರದಲ್ಲೂ ಅನುಭವಿ ಕಲಾವಿದರ ದೊಡ್ಡ ತಾರಾಬಳಗವೇ ಇರಲಿದೆ. ‘ಪುಟ್ಟಕ್ಕನ ಮಕ್ಕಳು’ ಧಾರಾವಾಹಿಯಲ್ಲಿ ‘ಕಂಠಿ’ ಪಾತ್ರದ ಮೂಲಕ ಪರಿಚಿತರಾಗಿರುವ ಧನುಷ್ ಹಾಗೂ ಕೆಲವು ಧಾರಾವಾಹಿ ಹಾಗೂ ಚಲನಚಿತ್ರಗಳಲ್ಲಿ ನಟಿಸಿರುವ ಮನಸ್ವಿ ಈ ಸಿನಿಮಾದ ಮುಖ್ಯಭೂಮಿಕೆಯಲ್ಲಿದ್ದಾರೆ. ಉಳಿದ ಕಲಾವಿದರ ಆಯ್ಕೆ ನಡೆಯುತ್ತಿದೆ. ಇದೊಂದು ನಾಡಿನ ಕಥೆ. ಪ್ರೀತಿ, ಹಾಸ್ಯ, ಭಾವನಾತ್ಮಕ ದೃಶ್ಯಗಳು–ಹೀಗೆ ನೋಡುಗರಿಗೆ ಬೇಕಾದ ಎಲ್ಲಾ ಅಂಶಗಳಿರುವ ಮನರಂಜನೆಯೇ ಪ್ರಧಾನವಾದ ಕೌಟುಂಬಿಕ ಚಿತ್ರವಿದು. ಈ ಚಿತ್ರದಲ್ಲಿ ಮಳೆ ಮುಖ್ಯ ಪಾತ್ರವಹಿಸುತ್ತದೆ. ಹೀಗಾಗಿ ಚಿತ್ರೀಕರಣಕ್ಕೆ ಮಳೆಗಾಲಕ್ಕಾಗಿ ಕಾಯುತ್ತಿದ್ದೆವು. ಮುಂದಿನ ವಾರದಿಂದ ಚಿತ್ರೀಕರಣ ಆರಂಭವಾಗಲಿದೆ. ತೀರ್ಥಹಳ್ಳಿ, ಆಗುಂಬೆ, ಕಾರ್ಕಳ, ಚಿಕ್ಕಮಗಳೂರು ಮುಂತಾದ ಕಡೆ ಮೊದಲ ಹಂತದ ಚಿತ್ರೀಕರಣ ನಡೆಯಲಿದೆ’ ಎಂದರು ಉಮೇಶ್. v

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260526-51-851139570

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.