ದೇವರಾಜ್ ಕುಮಾರ್ ನಿರ್ಮಿಸಿ, ನಿರ್ದೇಶಿಸಿ, ನಟಿಸಿರುವ ‘ಆಯುಧ’ ಸಿನಿಮಾ ಸದ್ಯದಲ್ಲೇ ತೆರೆಗೆ ಬರಲಿದೆ.

ಚಿತ್ರಕ್ಕೆ ಸೆನ್ಸಾರ್ ಮಂಡಳಿಯು ‘ಎ’ ಪ್ರಮಾಣ ಪತ್ರ ನೀಡಿದೆ. ವರ್ಷಾಂತ್ಯದಲ್ಲಿ ಸಿನಿಮಾವನ್ನು ತೆರೆಗೆ ತರುವ ಆಲೋಚನೆಯಲ್ಲಿ ಚಿತ್ರತಂಡವಿದೆ. ದೇವರಾಜ್ ಪಿಚ್ಚರ್ ಸ್ಟುಡಿಯೊ ಬ್ಯಾನರ್ನಡಿ ಈ ಸಿನಿಮಾ ನಿರ್ಮಾಣವಾಗಿದ್ದು, ಹೊನ್ನಾವರ, ಬೈಂದೂರು, ಚನ್ನಪಟ್ಟಣ ಹಾಗೂ ಬೆಂಗಳೂರಿನಲ್ಲಿ ಚಿತ್ರೀಕರಣ ನಡೆದಿದೆ. ನಾಲ್ಕು ಹಾಡುಗಳು ಹಾಗೂ ನಾಲ್ಕು ಸಾಹಸ ಸನ್ನಿವೇಶಗಳಿರುವ ಈ ಚಿತ್ರವು ಆ್ಯಕ್ಷನ್ ಥ್ರಿಲ್ಲರ್ ಫ್ಯಾಮಿಲಿ ಡ್ರಾಮಾ ಜಾನರ್ನಲ್ಲಿದೆ. ‘ಡೇಂಜರ್ ಜೋನ್’, ‘ನಿಶ್ಯಬ್ದ 2’, ‘ಅನುಷ್ಕಾ’, ‘ತಾಜ್ ಮಹಲ್ 2’ ಚಿತ್ರಗಳನ್ನು ನಿರ್ದೇಶಿಸಿರುವ ದೇವರಾಜ್ ಕುಮಾರ್ ಅವರ ಐದನೇ ಸಿನಿಮಾವಿದು.

ಸಿನಿಮಾದಲ್ಲಿ ನಾಯಕಿಯರಾಗಿ ಅಮೃತ ಹಾಗೂ ಸಂಹಿತ ವಿನ್ಯ ನಟಿಸಿದ್ದು, ರಘು, ಸೂರಿ ಮುಂತಾದವರು ತಾರಾಬಳಗದಲ್ಲಿದ್ದಾರೆ. ಸತೀಶ್ ಸ್ಟೀವನ್ ಸಂಗೀತ ನಿರ್ದೇಶನ, ವೀನಸ್ ಮೂರ್ತಿ ಛಾಯಾಚಿತ್ರಗ್ರಹಣ, ಚಂದ್ರು ಬಂಡೆ ಸಾಹಸ ನಿರ್ದೇಶನ ಚಿತ್ರಕ್ಕಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.