ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಪೋಲಿಯೊ ಮುಕ್ತ ಸಮಾಜ ನಿರ್ಮಾಣಕ್ಕೆ ಶ್ರಮಿಸಿ’

11ರಿಂದ ಪಲ್ಸ್ ಪೋಲಿಯೊ ಲಸಿಕಾ ಅಭಿಯಾನ
Last Updated 8 ಮಾರ್ಚ್ 2018, 4:22 IST
ಅಕ್ಷರ ಗಾತ್ರ

ಯಾದಗಿರಿ: ‘ಮಾರ್ಚ್ 11ರಿಂದ ಎರಡನೇ ಸುತ್ತಿನ ಪೋಲಿಯೊ ಲಸಿಕಾ ಕಾರ್ಯಕ್ರಮದಲ್ಲಿ ಸಕ್ರಿಯವಾಗಿ ಪಾಲ್ಗೊಂಡು ಐದು ವರ್ಷದೊಳಗಿನ ಮಕ್ಕಳಿಗೆ ತಪ್ಪದೆ ಲಸಿಕೆ ಹಾಕಿಸಿ ಗುರಿ ಸಾಧಿಸಬೇಕು’ ಎಂದು ಜಿಲ್ಲಾಧಿಕಾರಿ ಜೆ.ಮಂಜುನಾಥ್ ಹೇಳಿದರು.

ಇಲ್ಲಿನ ಜಿಲ್ಲಾಧಿಕಾರಿ ಸಭಾಂಗಣದಲ್ಲಿ ಬುಧವಾರ ನಡೆದ ಎರಡನೇ ಸುತ್ತಿನ ಪಲ್ಸ್ ಪೋಲಿಯೊ ಕಾರ್ಯಕ್ರಮದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

‘ಮಾಚ್ 11ರಿಂದ 14 ರವರೆಗೆ ಎರಡನೇ ಸುತ್ತಿನ ಪಲ್ಸ್ ಪೋಲಿಯೊ ಕಾರ್ಯಕ್ರಮವು ಪ್ರತಿಯೊಂದು ಪೋಲಿಯೊ ಬೂತ್‌ಗಳಲ್ಲಿ ಹಮ್ಮಿಕೊಳ್ಳಲಾಗಿದೆ. ಐದು ವರ್ಷದೊಳಗಿನ ಪ್ರತಿ ಮಕ್ಕಳಿಗೆ ಎರಡು ಹನಿ ಪೋಲಿಯೊ ಲಸಿಕೆ ಹಾಕಿಸುವಲ್ಲಿ ಅಧಿಕಾರಿಗಳು ಕಾರ್ಯಪ್ರವೃತ್ತರಾಗಬೇಕು’ ಎಂದು ಸೂಚಿಸಿದರು.

‘ನಗರ ಪ್ರದೇಶಗಳಲ್ಲಿ ಲಸಿಕಾ ಕಾರ್ಯಕ್ರಮದ ಬಗ್ಗೆ ಪ್ರತಿಯೊಂದು ವಾರ್ಡ್ ಅಥವಾ ಜನದಟ್ಟಣೆಯ ಪ್ರದೇಶಗಳಲ್ಲಿ ಪೋಲಿಯೊ ಲಸಿಕೆ ಕುರಿತು ಪ್ರಚಾರ ಕೈಗೊಂಡು ಜನರಲ್ಲಿ ಅರಿವು ಮೂಡಿಸಬೇಕು. ಅಂದಾಗ ಮಾತ್ರ ನಗರದ ಪ್ರದೇಶದಲ್ಲಿ ಉದ್ದೇಶಿತ ಗುರಿ ಸಾಧಿಸಲು ಸುಲಭವಾಗುತ್ತದೆ’ ಎಂದರು.

‘ಜಿಲ್ಲೆಯಲ್ಲಿ ಮಕ್ಕಳು ಒಟ್ಟು 1,47,706 ಲಕ್ಷ ಮಕ್ಕಳಿಗೆ ಲಸಿಕೆ ಹಾಕುವ ಗುರಿ ಹೊಂದಲಾಗಿದೆ. ಅಂದು ಬೂತ್‌ಮಟ್ಟದಲ್ಲಿ ಮಕ್ಕಳನ್ನು ಕರೆತಂದು ತಪ್ಪದೆ ಎರಡು ಹನಿ ಲಸಿಕೆ ಹಾಕಿಸಬೇಕು’ ಎಂದು ಅವರು ತಿಳಿಸಿದರು.

ಪ್ರತಿಯೊಂದು ಬೂತ್‌ಮಟ್ಟದ ಲಸಿಕೆ ವರದಿಯನ್ನು ತಕ್ಷಣ ನೀಡುವ ಕಾರ್ಯವನ್ನು ಅಧಿಕಾರಿಗಳು ಮಾಡಬೇಕು’ ಎಂದು ಅವರು ತಿಳಿಸಿದರು.

‘ಆಪ್ ಮೂಲಕ ಬೂತ್‌ಮಟ್ಟದ ವಿಳಾಸ ಹೆಸರು ವಿವರವನ್ನು ನೋಂದಣಿ ಮಾಡಬೇಕಿದ್ದು, ಈ ಕೆಲಸ ಪೂರ್ಣಗೊಳಿಸಿದರೆ ಯಾವುದೇ ಕ್ಷಣದಲ್ಲಿ ತಕ್ಷಣ ಮಾಹಿತಿ ಒದಗಲಿದೆ. ಇದರಿಂದ ಬೇರೆ ಬೇರೆ ಸ್ವರೂಪದಲ್ಲಿ ತುಂಬಾ ಪ್ರಯೋಜನವಾಗಲಿದೆ. ಇದನ್ನು ಸದ್ಬಳಕೆ ಮಾಡಿಕೊಳ್ಳಬೇಕು’’ ಎಂದು ಜಿಲ್ಲಾಧಿಕಾರಿ ಅಧಿಕಾರಿಗಳಿಗೆ ಮಾರ್ಗದರ್ಶನ ನೀಡಿದರು.

‘ಇದಕ್ಕೆ ಪ್ರತಿಕ್ರಿಯಿಸಿದ ಅಧಿಕಾರಿಗಳು ಜಿಐಎಸ್ ಆಪ್‌ನಲ್ಲಿ ಜಿಲ್ಲೆಯ ತಾಲ್ಲೂಕು ಹೆಸರು ತೋರಿಸುತ್ತಿಲ್ಲ. ಈ ಬಗ್ಗೆ ಮಾಹಿತಿ ನೋಂದಾಯಿಸಲು ಆಗುತ್ತಿಲ್ಲ’ ಎಂದು ಅಸಹಾಯಕತೆ ವ್ಯಕ್ತಪಡಿಸಿದರು.

ಜಿಲ್ಲಾ ಆರೋಗ್ಯ ಕುಟುಂಬ ಕಲ್ಯಾಣ ಇಲಾಖೆ ಅಧಿಕಾರಿ ಡಾ.ನರಸಿಂಹಲು, ಸುರಪುರ ತಾಲ್ಲೂಕು ವೈದ್ಯಾಧಿಕಾರಿ ಡಾ.ರಾಜಾ ವೆಂಕಟಪ್ಪ ನಾಯಕ ಮುಂತಾದವರು ಸಭೆಯಲ್ಲಿ ಪಾಲ್ಗೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT